HomeKarnatakaBREAKING: ಎಲ್ ಪಿಜಿ ಗ್ಯಾಸ್ ಸಾಗಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರೊಕೆ: ಹುಬ್ಬಳ್ಳಿ-ಕಲಘಟಗಿ-ಯಲ್ಲಾಪುರ ಸಂಚಾರ...

BREAKING: ಎಲ್ ಪಿಜಿ ಗ್ಯಾಸ್ ಸಾಗಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರೊಕೆ: ಹುಬ್ಬಳ್ಳಿ-ಕಲಘಟಗಿ-ಯಲ್ಲಾಪುರ ಸಂಚಾರ ಮಾರ್ಗ ಬದಲಾವಣೆ

ಹುಬ್ಬಳ್ಳಿ: ಎಲ್ ಪಿಜಿ ಗ್ಯಾಸ್ ಸಾಗಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರೊಕೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗೂಟಿ-ಅಂಕೋಲಾ ರಸ್ತೆಯ ತಂಬೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಗ್ಯಾಸ್ ಸೋರಿಕೆ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಲಘಟಗಿ-ಯಲ್ಲಾಪುರ ರಸ್ತೆ ಮಾರ್ಗ ಬದಲಾವಣೆ ಮಾಡಲಗಿದೆ.

ವಾಹನ ಸವಾರರು ಹುಬ್ಬಳ್ಳಿಯ ತಡಸ ಕ್ರಾಸ್ ಮುಂಡಗೋಡು ಮೂಲಕ ತೆರಳಲು ಪೊಲೀಸರು ಸೂಚನೆ ನೀಡಿದ್ದಾರೆ. ಯಲ್ಲಾಪುರದಿಂದ ಹುಬ್ಬಳ್ಳಿಗೆ ಬರುವ ವಾಹನಗಳ ಸಂಚಾರ ಮಾರ್ಗವನ್ನೂ ಬದಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಲ್ಲಾಪುರ ಹಳಿಯಾಯ ಕ್ರಾಸ್ ನಿಂದ ಧಾರವಾಡ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಯಾವುದೇ ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಪೊಲೀಸರು ನಿಷೇಧ ಹೇರಿದ್ದಾರೆ. ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಕಲಘಟಗಿ ಪೊಲೀಸರು ಬೀಡು ಬಿಟ್ಟಿದ್ದು, ಮುನ್ನೆಚ್ಚರಿಕ ಅಕ್ರಮಗಳನ್ನು ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular