HomeLatest NewsBIG NEWS: ಗೋದಾವರಿ ನದಿಯಲ್ಲಿ ಈಜಲು ಹೋಗಿದ್ದಾಗ ದುರಂತ: ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು

BIG NEWS: ಗೋದಾವರಿ ನದಿಯಲ್ಲಿ ಈಜಲು ಹೋಗಿದ್ದಾಗ ದುರಂತ: ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು

ಹೈದರಾಬಾದ್: ಗೋದಾವರಿ ನದಿಯಲ್ಲಿ ಈಜಲು ತೆರಳಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಎಲೂರು ಜಿಲ್ಲೆಯ ಗೋದಾವರಿ ನದಿಯಲ್ಲಿ ಈ ದುರಂತ ಸಂಭವಿಸಿದೆ. ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರ ಐವರಲ್ಲಿ ಮೂವರ ಶವ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮೃತ ವಿದ್ಯಾರ್ಥಿಗಳು ಗುಂಟೂರು ಜಿಲ್ಲೆಯ ಅಮರಾವತಿಯ ಖಾಸಗಿ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನಾನಕ್ಕಾಗಿ ನದಿಗೆ ಇಳಿದಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಮಾತನಾಡಿರುವ ಪೋಲವರಂ ಉಪ ಪೊಲೀಸ್ ವರಿಷ್ಠಾಧಿಕಾರಿಎಂ ವೆಂಕಟೇಶ್ವರ, ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ನಾನಕ್ಕೆ ನದಿಗೆ ಇಳಿದ ನಂತರ ಮುಳುಗಿ ಸಾವನ್ನಪ್ಪಿದರು, ಮತ್ತು ಇಬ್ಬರು ಬದುಕುಳಿದಿದ್ದಾರೆ. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಈಜಲು ತಿಳಿದಿದ್ದರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಉಳಿದವರು ಈಜಲು ಬರದೆ ಆಳವಾದ ನೀರಿನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದರು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ನದಿ ಆಳವಿಲ್ಲ ಎಂದು ಭಾವಿಸಿ ಇಳಿದಿದ್ದಾರೆ. ಅವರಿಗೆ  ನದಿಯ ಪರಿಸ್ಥಿತಿಗಳ ಬಗ್ಗೆ ಅರಿವಿನ ಕೊರತೆಯಿತ್ತು. ಮೂರು ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಎಸ್‌ಡಿಆರ್‌ಎಫ್ ತಂಡದಿಂದ ಉಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular