HomeLatest NewsBREAKING: ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ವಿರೋಧಿಸಿ ಪ್ರತಿಭಟನೆ: ಹೋರಾಟ ಕೊಪ್ಪಳದಿಂದ ಬೆಂಗಳೂರಿಗೆ ಶಿಫ್ಟ್

BREAKING: ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ವಿರೋಧಿಸಿ ಪ್ರತಿಭಟನೆ: ಹೋರಾಟ ಕೊಪ್ಪಳದಿಂದ ಬೆಂಗಳೂರಿಗೆ ಶಿಫ್ಟ್

ಬೆಂಗಳೂರು: ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಕೊಪ್ಪಳದಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.

ನಾಡಿದ್ದು ಒಂದು ದಿನ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಹೋರಾಟಕ್ಕೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ನಿರ್ಧರಿಸಿದೆ. ಕೊಪ್ಪಳದ ನಗರಸಭೆ ಎದುರು ನಿರಂತರವಾಗಿ 142 ದಿನಗಳಿಂದ ನಡೆಯುತ್ತಿರುವ ಹೋರಾಟ ನಾಡಿದ್ದು ಬೆಂಗಳೂರಿಗೆ ಶಿಫ್ಟ್ ಆಗಲಿದೆ. ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ನಾಳೆ ಕೊಪ್ಪಳದಿಂದ ಬೆಂಗಳೂರಿಗೆ ಹೋರಾಟ ಹೊರಡಲಿದೆ. ಹೋರಾಟಗಾರರು ಎರಡು ಬಸ್ ಗಳಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಧರಣಿಗೆ ಸ್ವಾಮೀಜಿಗಳು, ರೈತ ಸಂಘಟನೆಗಳು ಸಾಥ್ ನೀಡಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳದ ಬಸಾಪುರದಲ್ಲಿ ವಿಸ್ತರಣೆಯಾಗುತ್ತಿರುವ ಬಲ್ಡೋಟಾ ಕಾರ್ಖಾನೆ ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular