HomeKarnatakaಅನುಮತಿ ಇಲ್ಲದೇ ಆಟವಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಬೆಲ್ಟ್ ನಿಂದ ಹೊಡೆದ ವಸತಿ ಶಾಲೆ ಪ್ರಿನ್ಸಿಪಾಲ್: ರೂಮಿನಲ್ಲಿ ಕೂಡಿಹಾಕಿ...

ಅನುಮತಿ ಇಲ್ಲದೇ ಆಟವಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಬೆಲ್ಟ್ ನಿಂದ ಹೊಡೆದ ವಸತಿ ಶಾಲೆ ಪ್ರಿನ್ಸಿಪಾಲ್: ರೂಮಿನಲ್ಲಿ ಕೂಡಿಹಾಕಿ ಹಲ್ಲೆ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಬೆಲ್ಟ್ ನಿಂದ ಹೊಡೆದಿರುವ ಘಟನೆ ಚಿಕ್ಕಮಗಳುರಿನ ಮೂಡಿಗೆರೆಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅನುಮತಿ ಪಡೆಯದೆ ಆಟವಾಡಿದರು ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಥಳಿಸಿದ್ದಾರೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಸೇರಿ ವಿದ್ಯಾರ್ಥಿಗಳ ಕೈಕಾಲುಗಳಿಗೆ ಬಾಸುಂಡೆ ಬರುವಂತೆ ಪ್ಲಾಸ್ಟಿಕ್ ಪೈಪ್ ಹಾಗೂ ಬೆಲ್ಟ್‌ನಿಂದ ಹೊಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ವಿದ್ಯಾರ್ಥಿಗಳನ್ನು ರೂಮಿನೊಳಗೆ ಕೂಡಿಹಾಕಿ ಬೀಗ ಹಾಕಿದ್ದಾರೆ. ವಸತಿ ಶಾಲೆಯ ರೂಮಿನೊಳಗಿಂದ ವಿದ್ಯಾರ್ಥಿಗಳ ಕಿರುಚಾಟ ಮತ್ತು ಅಳು ಕೇಳಿ ಪಕ್ಕದ ಕಾಫಿ ತೋಟದ ಕಾರ್ಮಿಕರು ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರೂಮಿನಲ್ಲಿದ್ದ 7 ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಏಳು ವಿದ್ಯಾರ್ಥಿಗಳನ್ನು ಪೊಲೀಸರು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಅವರ ಹೆಸರನ್ನು ಪೊಲೀಸರಿಗೆ ತಿಳಿಸಿದ್ದು, ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular