HomeKarnatakaಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ

ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ

“ಕೊಡಗು ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಂಪರ್ಕ ಹೊಂದಿರುವ ಪ್ರತಿ ಮನೆಗೂ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮತ್ತು ಬೇಡಿಕೆಗೆ ತಕ್ಕಂತೆ ಸರ್ಕಾರದ ನಿಯಮಾನುಸಾರ ಸರಬರಾಜು ಮಾಡುವಂತೆ” ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಡುಗೆ ಅನಿಲ ವಿತರಕರ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ದ ಸಾರಿರುವ ಸಮರ ತೀವ್ರಗೊಂಡಿರುವ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಒಂದು ರೀತಿಯ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಆ ನಿಟ್ಟಿನಲ್ಲಿ ಯಾರೂ ಸಹ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು” ಎಂದರು.

“ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಒಟ್ಟಾರೆ ಗ್ರಾಹಕರಿಗೆ ಗೃಹ ಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವುದು ಅತ್ಯಗತ್ಯ” ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಅನಧಿಕೃತ ದಾಸ್ತಾನು/ ವಿತರಣೆ/ ಕಾಳಸಂತೆಯಲ್ಲಿ ಮಾರಾಟ ಸೇರಿದಂತೆ ನಿಯಮಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ವಿದ್ಯಾರ್ಥಿ ನಿಲಯ, ವಸತಿ ನಿಲಯಗಳು, ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಇತರೆ ಆದ್ಯತಾ ಸಂಸ್ಥೆಗಳಿಗೆ ಆದ್ಯತಾ ಮೇರೆಗೆ ಅನಿಲ ಸಿಲಿಂಡರ್‌ಗಳನ್ನು ಪೂರೈಕೆ ಮಾಡುವಂತೆ” ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಆದ್ಯತೆ ಮೇರೆಗೆ ಹಾಗೂ ನಿಗದಿತ ಅವಧಿಯೊಳಗಾಗಿ ಗೃಹಬಳಕೆ ಸಿಲಿಂಡರ್‌ಗಳ ಪೂರೈಕೆ ಮಾಡಬೇಕು, ಕಡ್ಡಾಯವಾಗಿ ಎಫ್‍ಐಎಫ್‍ಒ ಪ್ರಕಾರವೇ ಗೃಹಬಳಕೆ ಸಿಲಿಂಡರ್‌ಗಳ ವಿತರಣೆ ಮಾಡಬೇಕು” ಎಂದರು.

“ಎಲ್‍ಪಿಜಿ ವಿತರಕರು ದಾಸ್ತಾನು ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು, ಇಕೆವೈಸಿ ಆಗದೇ ಇರುವ ಗ್ರಾಹಕರಿಗೆ ತಕ್ಷಣವೇ ಇಕೆವೈಸಿ ಮಾಡಿಸಿಕೊಂಡು, ಅನಿಲ ಸಿಲಿಂಡರ್ ಸರಬರಾಜು ಮಾಡುವಂತೆ” ಸಲಹೆ ನೀಡಿದರು.

ಅನಿಲ ಸಿಲಿಂಡರ್‌ ಪೂರೈಕೆಯಲ್ಲಿ ಕೃತಕ ಅಭಾವ ಸೃಷ್ಟಿಸುವುದು ಹಾಗೂ ಗ್ರಾಹಕರಿಂದ ಅನಧಿಕೃತವಾಗಿ ಹೆಚ್ಚಿನ ಹಣ ವಸೂಲಿ ಮಾಡುವಂತಿಲ್ಲ ಎಂದು ಸಭೆಯಲ್ಲಿ ಖಡಕ್ ಸೂಚನೆ ನೀಡಲಾಗಿದೆ.

ಗೃಹಬಳಕೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ವಿತರಿಸಬಾರದು. ವಿತರಣೆ/ ದಾಸ್ತಾನುಗಳ ವಿವರಗಳನ್ನು ಪ್ರತಿದಿನ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

“ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಸಂಬಂಧ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಳಜಿ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಎಚ್ಚರವಹಿಸುವಂತೆ” ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದರು.

ಜಿಲ್ಲೆಯಲ್ಲಿನ ಸಿಲಿಂಡರ್ ಗ್ರಾಹಕರ ಸಂಖ್ಯೆ

  • 1,81,126 ಗೃಹ ಬಳಕೆಯ ಅಡುಗೆ ಅನಿಲ ಸಂಪರ್ಕ
  • 60,101 ಕುಟುಂಬಗಳು ಒಂದು ಸಿಲಿಂಡರ್ ಸಂಪರ್ಕ
  • 1,21,025 ಕುಟುಂಬಗಳು 2 ಅನಿಲ ಸಿಲಿಂಡರ್ ಸಂಪರ್ಕ
  • 12,527 ಉಜ್ವಲ ಯೋಜನೆಯಡಿ ಸಂಪರ್ಕ
  • ಒಟ್ಟು ಗೃಹ ಬಳಕೆ ಸಿಲಿಂಡರ್ ಹೊಂದಿರುವ ಕುಟುಂಬಗಳು 1,93,653
  • ವಾಣಿಜ್ಯ ಬಳಕೆ ಸಿಲಿಂಡರ್ ಹೊಂದಿರುವವರು 9,601
  • ಬುಕ್ಕಿಂಗ್ ಆಗಿರುವುದು (ಗೃಹ ಬಳಕೆ) 16,829
  • ಬುಕ್ಕಿಂಗ್ ಆಗಿರುವುದು (ವಾಣಿಜ್ಯ ಬಳಕೆ) 505

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular