ಬೆಂಗಳೂರು: ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹಳೆ ಮದ್ರಾಸ್ ರಸ್ತೆಯ ಮೇಡಹಳ್ಳಿ ಬಳಿ ನಡೆದಿದೆ.
ಕ್ಯಾಂಟರ್ ವಾಹನದ ಟೈಯರ್ ಬ್ಲಾಸ್ಟ್ ಆಗಿ ಮೇಲ್ಸೇತುವೆ ಮೇಲೆ ನಿಂತಿದ್ದು, ಕ್ಯಾಂಟರ್ ನಿಲ್ಲಿಸಿ ಚಾಲಕ ಟೈರ್ ಚೇಂಜ್ ಮಾಡುತ್ತಿದ್ದ. ಈ ವೇಳೆ ಕ್ಯಾಂಟರ್ ಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ಅದರಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಣಿಕಂಠ, ಸುರೇಶ್, ಶ್ರೀನಿವಾಸ್ ಮೃತಪಟ್ಟವರು ಎಂದು ಹೇಳಲಾಗಿದೆ. ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಕೆಆರ್ ಪುರಂ ಸಂಚಾರ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

