ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನು ಕೊಲೆ ಮಾಡಲಾಗಿದೆ.
25 ವರ್ಷದ ಕಿರಣ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಾರಕಾಸ್ತ್ರದಿಂದ ತಲೆ ಮೇಲೆ ಹಲ್ಲೆ ನಡೆಸಿ ಕಿರಣ್ ಕೊಲೆ ಮಾಡಲಾಗಿದೆ. ಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ. ಇಂದು ಮುಂಜಾನೆ ಆರೋಪಿಗಳು ಕಿರಣ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾಮಮೂರ್ತಿ ನಗರದ ಟಿಸಿ ಪಾಳ್ಯ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

