ಕಲಬುರಗಿ: ಮೊಬೈಲ್ ಮನೆಯಲ್ಲೇ ಬಿಟ್ಟು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಪತ್ತೆಯಾಗಿದ್ದಾರೆ. ಕಲಬುರಗಿ ವಿಭಾಗಿಯ ಕಚೇರಿಯ ಜೆಇ ಸುನಿಲ್ ಹಕ್ಕಿ ನಾಪತ್ತೆಯಾಗಿದ್ದಾರೆ. ಕಳೆದ ಭಾನುವಾರದಿಂದ ಜೆಇ ಸುನಿಲ್ ನಾಪತ್ತೆಯಾಗಿದ್ದು, ಎಂ.ಬಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 15 ರಂದು ಮಧ್ಯಾಹ್ನ 12 ಗಂಟೆಗೆ ಮನೆಯಿಂದ ಸುನಿಲ್ ಹೊರ ಹೋಗಿದ್ದರು. ಹೊರ ಹೋಗುವಾಗ ಸುನಿಲ್ ತಾಯಿಯ ಬಳಿ 15,000 ರೂ. ಹಣ ತೆಗೆದುಕೊಂಡು ಹೋಗಿದ್ದಾರೆ. ಮೊಬೈಲ್ ಮನೆಯಲ್ಲಿ ಬಿಟ್ಟು ಆಫೀಸಿಗೆ ಹೋಗುವುದಾಗಿ ಹೇಳಿದ್ದರು. ಮೊಬೈಲ್ ತೆಗೆದುಕೊಂಡು ಹೋಗುವಂತೆ ತಾಯಿ ಹೇಳಿದರೂ ಕೂಡ ಬಹಳ ಕಾಲ್ ಬರುತ್ತೆ ಬೇಡ ಎಂದು ಮನೆಯಲ್ಲೇ ಬಿಟ್ಟು ಹೋಗಿದ್ದರು.
ಆದರೆ ಅವರು ವಾಪಸ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಸುನಿಲ್ ಪತ್ತೆಯಾಗದ ಹಿನ್ನೆಲೆಯಲ್ಲಿ ದೂರು ನೀಡಿದ್ದಾರೆ. ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

