HomeLatest NewsBREAKING: ಉಪಚುನಾವಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 32.52 ಲಕ್ಷ ಹಣ ಜಪ್ತಿ

BREAKING: ಉಪಚುನಾವಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 32.52 ಲಕ್ಷ ಹಣ ಜಪ್ತಿ

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕುರುಡು ಕಾಂಚಾಣವೂ ಭಾರಿ ಸದ್ದು ಮಾಡಲಾರಂಭಿಸಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಪಾರಪ್ರಮಾಣದ ಅಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಅಕ್ರಮ ಹಣ ಸಾಗಾಟವನ್ನು ತಡೆಯಲು ಮತ್ತು ಮತದಾರರಿಗೆ ಹಣದ ಆಮಿಷ ಒಡ್ಡುವುದನ್ನು ನಿಯಂತ್ರಿಸಲು ವ್ಯಾಪಕ ತಪಾಸಣೆ ಹಾಗೂ ನಿಗಾವನ್ನು ತೀವ್ರಗೊಳಿಸಿದೆ. ಈ ನಡುವೆಯೇ ದಾಖಲೆ ಇಲ್ಲದ 32.52 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular