ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಕೊಲೆಗೈದು ಶವವನ್ನು ರಸ್ತೆ ಬದಿ ಎಸೆದು ಹೋಗಿರುವ ಘಟನೆ ನಡೆದಿದೆ.
ಬೆಂಅಗ್ಳೂರಿನ ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿ ಮಹಿಳೆಯ ಶವ ಕಂಡ ಸ್ಥಳೀಯರು 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯಾದ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

