HomeKarnatakaಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ; ಈಗ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ: ಮಾಜಿ...

ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ; ಈಗ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ: ಮಾಜಿ ಸಿಎಂ ಯಡಿಯೂರಪ್ಪ

ದಾವಣಗೆರೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ಜನರಿಗೆ ಅಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದ ಯಡಿಯೂರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಒಂದಂತೂ ನಿಶ್ಚಿತ, ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗ್ತಿದೆ. ಅಭಿವೃದ್ಧಿ ಕುಂಠಿತವಾಗಿದೆ. ಜನರಿಗೆ ತಕ್ಕ ಉತ್ತರ ಕೊಡುವ ಅವಕಾಶ ಸಿಕ್ಕಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಅಭ್ಯರ್ಥಿ ಜೊತೆ ನಾಮಪತ್ರ ಸಲ್ಲಿಸಿ ಬಂದಿದ್ದೇವೆ. ಜನ ಬೆಂಬಲದ ವಾತಾವರಣ ನೋಡಿದಾಗ ನಮ್ಮ ಅಭ್ಯರ್ಥಿ ಗೆಲ್ತಾರೆ ಎಂಬ ವಿಶ್ವಾಸ ನಮಗಿದೆ. ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಗೆದ್ದೇ ಗೆಲ್ಲುತ್ತೇವೆ. ತಕ್ಕ ಉತ್ತರ ಕೊಡುವ ಅವಕಾಶ ಜನರಿಗೆ ಸಿಕ್ಕಿದೆ. ಅದನ್ನು ಜನ ಸದುಪಯೋಗಪಡಿಸಿಕೊಳ್ಳುವ ವಿಶ್ವಾಸವಿದೆ ಎಂದರು.

ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರು ಪತ್ನಿ ಹಾಗೂ ಬಿಜೆಪಿ ಮುಖಂಡರ ಜೊತೆ ತೆರಳಿ ಇಂದು ಬೆಳಗ್ಗೆ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದ್ರು.‌ ದುರ್ಗಾಂಭಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಿಜೆಪಿ ನಾಯಕರೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಸಿದರು. ಬೃಹತ್ ಮೆರವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಂಸದರು, ಶಾಸಕರು, ಮಾಜಿ‌ ಸಚಿವರು ಸೇರಿದಂತೆ ಹಲವರು ಭಾಗಿಯಾಗಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular