HomeKarnatakaಶಿಕ್ಷಣ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮಾ.25 ರಿಂದ ಸಮಗ್ರ ಶೈಕ್ಷಣಿಕ ಉದ್ಯೋಗ ಮೇಳ

ಶಿಕ್ಷಣ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮಾ.25 ರಿಂದ ಸಮಗ್ರ ಶೈಕ್ಷಣಿಕ ಉದ್ಯೋಗ ಮೇಳ

ಮಡಿಕೇರಿ: ಕೊಡಗು ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ.

ಈ ಬೃಹತ್ ಕಾರ್ಯಕ್ರಮವನ್ನು ರೀಡ್‍ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಪದವೀಧರರು ಮತ್ತು ತರಬೇತಿ ಪಡೆದ ಶಿಕ್ಷಕರು (ಬಿ.ಇಡಿ, ಡಿ.ಇಡಿ, ಎಂ.ಇಡಿ, ಬಿ.ಪಿಇಡಿ, ಎಂಪಿ.ಇಡಿ) ಅನುಭವ ಹೊಂದಿದ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಉದ್ಯೋಗ ಹುಡುಕುವವರಿಗೆ ಸ್ಥಳದಲ್ಲಿಯೇ ನೋಂದಣಿ ಮತ್ತು ಸಂದರ್ಶನದ ಅವಕಾಶ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಮತ್ತು ಮೈಸೂರಿನ 12 ಪರಿಣಿತ ತರಬೇತುದಾರರಿಂದ, 12 ವಿವಿಧ ವಿಷಯಗಳ ಮೇಲೆ ಒಟ್ಟು 30 ವಿಶೇಷ ತರಬೇತಿ ಕಾರ್ಯಾಗಾರ ನಡೆಯಲಿದೆ.

ಕೊಡಗು ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.6364558383 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular