HomeKarnatakaಇನ್ನು ಸ್ಥಳೀಯ ಸಂಸ್ಥೆ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ

ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗೆ ಇನ್ನು ಮುಂದೆ ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡಲಾಗುವುದು. ಈ ಕುರಿತಾದ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ಬಿಜೆಪಿ ಸದಸ್ಯರ ವಿರೋಧ ಮತ್ತು ಸಭಾತ್ಯಾಗದ ನಡುವೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2026 ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ವಿಧೇಯಕ ಪರ್ಯಾಲೋಚನೆಗೆ ಮಂಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಬಗ್ಗೆ ವಿಶ್ವಾಸ ಕಡಿಮೆಯಾಗಿ ಕಳವಳ ವ್ಯಕ್ತವಾಗಿದೆ. ಹೀಗಾಗಿ ಚುನಾವಣೆ ಮೇಲಿನ ನಂಬಿಕೆ ಪುನರ್ ಸ್ಥಾಪಿಸಲು ವಿಧೇಯಕ ತರಲಾಗಿದೆ. ಇವಿಎಂ ಬದಲಿಗೆ ಮತಪತ್ರ ಬಳಕೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯನ್ನು ರಾಜ್ಯ ಚುನಾವಣಾ ಆಯೋಗದಿಂದ ಮಾಡಿಸಲು ವಿಧೇಯಕದಲ್ಲಿ ತಿದ್ದುಪಡಿತರಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವಿಎಂ ಬದಲಿಗೆ ಮತಪೆಟ್ಟಿಗೆ ಬಳಸುವ ಮೂಲಕ ಶಿಲಾಯುಗಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಧೇಯಕದ ಪ್ರತಿ ಹರಿದು ಹಾಕಿ ಸದಸ್ಯರೊಂದಿಗೆ ಸಭಾತ್ಯಾಗ ಮಾಡಿದ್ದಾರೆ. ಬಿಜೆಪಿ ಸದಸ್ಯರ ಅನುಪಸ್ಥಿತಿಯಲ್ಲಿ ವಿಧಾನಸಭೆ ವಿಧೇಯಕಕ್ಕೆ ಅಂಗೀಕಾರ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular