HomeKarnatakaBIG NEWS: ಮರ್ಯಾದೆಗೇಡು ಹತ್ಯೆ ತಡೆ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ

BIG NEWS: ಮರ್ಯಾದೆಗೇಡು ಹತ್ಯೆ ತಡೆ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಅಂತರ್ಜಾತಿ ಮದುವೆಯಾದ ಸಂದರ್ಭದಲ್ಲಿ ಮರ್ಯಾದೆಗೇಡು ಹತ್ಯೆ, ಹಲ್ಲೆ, ಬಹಿಷ್ಕಾರದಂತಹ ಘಟನೆಗಳನ್ನು ತಡೆಯುವ ‘ಇವ ನಮ್ಮವ ಇವ ನಮ್ಮವ’ ವಿಧೇಯಕ- 2026 ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ವಿಧೇಯಕ ಪರ್ಯಾಲೋಚನೆಗೆ ಮಂಡಿಸಿದ ಸಚಿವ ಎಚ್.ಕೆ. ಪಾಟೀಲ್, 12ನೇ ಶತಮಾನದಲ್ಲಿ ಬಸವಣ್ಣ ಇವನಾರವ ಇವನಾರವ ಎಂದೆನಿಸದಿರಯ್ಯಾ ಎಂದಿದ್ದಾರೆ. ಆದರೆ ತಾರತಮ್ಯ ಇಂದಿಗೂ ಮುಂದುವರೆದಿದೆ. ಜೊತೆಗೆ ಅಂತರ್ಜಾತಿ ವಿವಾಹದ ವೇಳೆ ಹತ್ಯೆ, ಹಲ್ಲೆ, ಬಹಿಷ್ಕಾರದಂತಹ ಅಮಾನವೀಯ ಘಟನೆ ನಡೆಯುತ್ತಿದ್ದು, ಇದನ್ನು ತಡೆಯಲು ವಿಧೇಯಕ ತರಲಾಗಿದೆ ಎಂದು ಹೇಳಿದ್ದಾರೆ.

ಮರ್ಯಾದೆಗೇಡು ಹತ್ಯೆಗೆ ಸಹಕಾರ ನೀಡಿದವರು, ಕಾರಣರಾದವರೆಗೆ ಶಿಕ್ಷೆಗೆ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿವಾಹ ಆಗಲು ಬಯಸುವವರು ತಮ್ಮ ವಯಸ್ಸು, ಒಟ್ಟಿಗೆ ಇರಲು ಸಮ್ಮತಿ ದೃಢೀಕರಿಸಬೇಕು. ಅವರಿಗೆ ಜಿಲ್ಲಾಧಿಕಾರಿ ಅಥವಾ ಅವರ ಪ್ರತಿನಿಧಿ ಅಧಿಕಾರಿ ಎದುರು ವೇದಿಕೆ ಕಲ್ಪಿಸಲಾಗುವುದು. ಇದು ಲಿವಿಂಗ್ ಟುಗೆದರ್ ಸಂಸ್ಕೃತಿ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ, ಮರ್ಯಾದೆ, ಸಂಪ್ರದಾಯದ ಹೆಸರಿನಲ್ಲಿ ಮದುವೆಯ ಹಕ್ಕು ಉಲ್ಲಂಘಿಸಿ ಹಿಂಸೆ, ಕಿರುಕುಳ, ಬೆದರಿಕೆ, ಸಾಮೂಹಿಕ ಬಹಿಷ್ಕಾರ ಹಾಕುವುದನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲು ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ(ಇವ ನಮ್ಮವ ಇವ ನಮ್ಮವ) ವಿಧೇಯಕ -2026ರಲ್ಲಿ ಪ್ರಸ್ತಾಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular