ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಅರ್ಬನ್ ಓಯಸಿಸ್ ಮಾಲ್ ಬಳಿ ಅಪಘಾತ ಸಂಭವಿಸಿದೆ.
ತಾಜ್ ನಗರದ ನಿವಾಸಿಗಳಾದ ಫಯಾಜ್(25), ಮೋಹಿದ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೇಬಲ್ ವೈರ್ ರಸ್ತೆಯ ಮೇಲೆ ಬಿದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

