HomeKarnatakaವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ

ವಸತಿ ಶಾಲೆಗಳ ಪ್ರವೇಶಕ್ಕೆ ಅಂತಿಮ RANK ಪಟ್ಟಿ ಪ್ರಕಟ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯ ವಸತಿ ಶಾಲೆಗಳ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳ ಹಾಗೂ ಇತರೆ ವಸತಿಶಾಲೆಗಳಿಗೆ 6ನೇ ತರಗತಿಗೆ ಸೀಟು ಹಂಚಿಕೆ -2026 ರ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಗಳ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳು ಹಾಗೂ ಇತರೆ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ದಿನಾಂಕ 01.03.2026 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ದಿನಾಂಕ 03.03.2026 ರಂದು ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ 07.03.2026 ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ಪರಿಷ್ಕೃತಗೊಂಡ ಕೀ ಉತ್ತರಗಳನ್ನು ದಿನಾಂಕ 07.03.2026 ರಂದು ಪ್ರಕಟಿಸಿ, ಸದರಿ ದಿನಾಂಕದಂದೇ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ದಿನಾಂಕ 18.03.2026 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗದಿತ ದಿನಾಂಕದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಗಳನ್ನು ಮತ್ತು ರ್ಯಾಂಕ್‌ನ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ದಿನಾಂಕ 24.03.2026 ರಂದು ಪ್ರಕಟಿಸಲಾಗಿದೆ.

ಸಹಾಯವಾಣಿ: 080-23 460 460.

ಇ-ಮೇಲ್: [email protected]

ವೆಬ್‌ಸೈಟ್: http://kea.kar.nic.in

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular