HomeIndiaBIG NEWS: ದೇಶದ ರಾಜಕೀಯದಲ್ಲಿ ಮಹತ್ತರ ಬದಲಾವಣೆ: ಕರ್ನಾಟಕಕ್ಕೆ 42 ಸಂಸದರ ಸ್ಥಾನ ಸಾಧ್ಯತೆ

BIG NEWS: ದೇಶದ ರಾಜಕೀಯದಲ್ಲಿ ಮಹತ್ತರ ಬದಲಾವಣೆ: ಕರ್ನಾಟಕಕ್ಕೆ 42 ಸಂಸದರ ಸ್ಥಾನ ಸಾಧ್ಯತೆ

ನವದೆಹಲಿ: ದೇಶದ ರಾಜಕೀಯ ಭೂಪಟದಲ್ಲಿ ಮಹತ್ತರ ಬದಲಾವಣೆ ಗಾಳಿ ಬೀಸುವ ಸಾಧ್ಯತೆ ಇದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816 ಕ್ಕೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ಈ ಕುರಿತದ ಸಾಂವಿಧಾನಿಕ ತಿದ್ದುಪಡಿ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ.

2011ರ ಜನಗಣತಿ ಆಧರಿಸಿ ಕ್ಷೇತ್ರಗಳ ಮರ ವಿಂಗಡಣೆ ಪ್ರಕ್ರಿಯೆ ನಡೆದಲ್ಲಿ ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗಲಿದೆ. ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ತಿದ್ದುಪಡಿ ಕೂಡ ಈ ವಿಧೇಯಕದ ಭಾಗವಾಗಲಿದೆ.

2029ರ ಚುನಾವಣೆಗೆ ಮೊದಲು ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ಪಕ್ಷಗಳ ಸಹಮತದೊಂದಿಗೆ ಮಹತ್ವದ ತಿದ್ದುಪಡಿ ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕರ್ನಾಟಕದ ಈಗಿರುವ 28 ಲೋಕಸಭಾ ಸದಸ್ಯ ಸ್ಥಾನಗಳು 42ಕ್ಕೆ ಏರಿಕೆಯಾಗಲಿವೆ. ತಮಿಳುನಾಡು 39 ರಿಂದ 59, ಕೇರಳ 20 ರಿಂದ 30, ಆಂಧ್ರ ಪ್ರದೇಶ 25 ರಿಂದ 38, ಮಹಾರಾಷ್ಟ್ರ 48 ರಿಂದ 72 ಸಂಸದರ ಸ್ಥಾನಗಳನ್ನು ಹೊಂದುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular