ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ 27, 2026 ರಂದು ಶ್ರೀರಾಮನವಮಿ ಹಬ್ಬವಿರುವುದರಿಂದ ಮಹತ್ವದ ಆದೇಶವೊಂದನ್ನು ಹೊರಡಿಸಲಾಗಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಅಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ನಗರದ ಎಲ್ಲಾ ಕಸಾಯಿಖಾನೆಗಳು, ಚಿಲ್ಲರೆ ಮಾಂಸದ ಅಂಗಡಿಗಳು ಮತ್ತು ಮಾರುಕಟ್ಟೆ ಮಳಿಗೆಗಳಿಗೆ ಈ ನಿಯಮ ಅನ್ವಯವಾಗುತ್ತದೆ.ಶ್ರೀರಾಮನವಮಿ ಹಬ್ಬದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹಬ್ಬದ ದಿನದಂದು ಯಾವುದೇ ಗೊಂದಲಕ್ಕೀಡಾಗದೆ ಸರ್ಕಾರದ ಈ ಆದೇಶವನ್ನು ಪಾಲಿಸಲು ನಾಗರಿಕರಲ್ಲಿ ವಿನಂತಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ದಿನಾಂಕ: 27-03-2026 ರ ಶುಕ್ರವಾರ “ಶ್ರೀರಾಮನವಮಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರದೇಶ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

