HomeLatest NewsBIG NEWS : ರಾಜ್ಯದಲ್ಲಿ ಹೊರಗುತ್ತಿಗೆ ನೌಕರರ ಖಾಯಂಗೆ ಅವಕಾಶ ಇಲ್ಲ ; CM ಸಿದ್ದರಾಮಯ್ಯ ಸ್ಪಷ್ಟನೆ.!

BIG NEWS : ರಾಜ್ಯದಲ್ಲಿ ಹೊರಗುತ್ತಿಗೆ ನೌಕರರ ಖಾಯಂಗೆ ಅವಕಾಶ ಇಲ್ಲ ; CM ಸಿದ್ದರಾಮಯ್ಯ ಸ್ಪಷ್ಟನೆ.!

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಾವಿರಾರು ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅವರನ್ನು ಖಾಯಂಗೊಳಿಸಲು ಸದ್ಯದ ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಐಹೊಳೆ ದುರ್ಯೋಧನ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಿಎಂ ರಾಜ್ಯದ ವಿವಿಧ ಇಲಾಖೆಗಳಲ್ಲಿ ಸದ್ಯ 96,844 ನೌಕರರು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ..ಗುತ್ತಿಗೆ ನೌಕರರನ್ನು ಸರ್ಕಾರಿ ಸೇವೆಯಲ್ಲಿ ಖಾಯಂಗೊಳಿಸಲು ಈಗಿರುವ ನಿಯಮಗಳಲ್ಲಿ ಯಾವುದೇ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಈ ನೌಕರರಿಗೆ ಕಾರ್ಮಿಕ ಇಲಾಖೆಯ ನಿಯಮದಂತೆ ಕನಿಷ್ಠ ವೇತನ ಮತ್ತು ತುಟ್ಟಿಭತ್ಯೆಯನ್ನು ನೀಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಹಲವು ವರ್ಷಗಳಿಂದ ಸೇವೆಯಲ್ಲಿರುವ ತಮಗೆ ಖಾಯಂ ಆತಿ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದ ಸುಮಾರು ಒಂದು ಲಕ್ಷದಷ್ಟು ಹೊರಗುತ್ತಿಗೆ ನೌಕರರಿಗೆ ಈ ಹೇಳಿಕೆಯು ಭಾರಿ ನಿರಾಸೆ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular