HomeKarnatakaB.S ಯಡಿಯೂರಪ್ಪ ರಾಜಕೀಯ ಪಯಣಕ್ಕೆ 50 ರ ಸಂಭ್ರಮ ; ಚಿತ್ರದುರ್ಗದಲ್ಲಿ ಬೃಹತ್ ಅಭಿಮಾನೋತ್ಸವ ಆಯೋಜನೆ.!

B.S ಯಡಿಯೂರಪ್ಪ ರಾಜಕೀಯ ಪಯಣಕ್ಕೆ 50 ರ ಸಂಭ್ರಮ ; ಚಿತ್ರದುರ್ಗದಲ್ಲಿ ಬೃಹತ್ ಅಭಿಮಾನೋತ್ಸವ ಆಯೋಜನೆ.!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಸದೀಯ ರಾಜಕಾರಣದಲ್ಲಿ ಐದು ದಶಕಗಳನ್ನು (50 ವರ್ಷ) ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, ಬರುವ ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಬೃಹತ್ ಶಕ್ತಿ ಪ್ರದರ್ಶನ ನಡೆಸಲು ಪಕ್ಷದ ನಾಯಕರು ಸಜ್ಜಾಗಿದ್ದಾರೆ.

ಹೌದು. ಸುಮಾರು 10 ಲಕ್ಷ ಅಭಿಮಾನಿಗಳನ್ನು ಒಂದೆಡೆ ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಬಿಜೆಪಿ, ಈ ಐತಿಹಾಸಿಕ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದೆ. ಲೋಕಸಭಾ ಚುನಾವಣೆಯ ನಂತರದ ರಾಜಕೀಯ ಬೆಳವಣಿಗೆಗಳ ನಡುವೆ, ಬಿಎಸ್‌ವೈ ಅವರ ಈ ಸುವರ್ಣ ಸಂಭ್ರಮವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸುವ ನಿರೀಕ್ಷೆಯಿದೆ.

ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಸೇವೆಯ ಸ್ಮರಣಾರ್ಥ ಈ ಕಾರ್ಯಕ್ರಮ ನಡೆಯುತ್ತಿದೆ.ಕೋಟೆ ನಾಡು ಚಿತ್ರದುರ್ಗದಲ್ಲಿ ಕಾರ್ಯಕ್ರಮ ಆಯೋಜನೆಯಾಗಲಿದ್ದು, ಮೇ 20 ರೊಳಗಾಗಿ ಸಮಾರಂಭ ಮುಗಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ಶಾ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಮಟ್ಟದ ಪ್ರಭಾವಿ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದ ಯಶಸ್ಸಿಗಾಗಿ ಪ್ರತಿ ಜಿಲ್ಲೆಯಲ್ಲೂ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಜನರನ್ನು ಕರೆತರುವ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.ಕೇವಲ ಅಭಿಮಾನೋತ್ಸವ ಮಾತ್ರವಲ್ಲದೆ, ಲೋಕಸಭಾ ಚುನಾವಣೆಯ ನಂತರದ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದಲೂ ಈ ಸಮಾವೇಶ ಮಹತ್ವ ಪಡೆದುಕೊಂಡಿದೆ.ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖ ನಾಯಕರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular