ಬೆಂಗಳೂರು : ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಷ್ಠಿತ ಖಾಸಗಿ ವಸತಿ ಶಾಲೆಗಳಲ್ಲಿ 6ನೇತರಗತಿ ಪ್ರವೇಶಕ್ಕಾಗಿ ಅರ್ಹ ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: ಮಾರ್ಚ್ 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 07, 2026 (ದಾಖಲೆಗಳ ಪ್ರಕಾರ ಪರಿಷ್ಕೃತ ದಿನಾಂಕ)
- ಪ್ರವೇಶ ಪರೀಕ್ಷೆ: ದಿನಾಂಕವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಅಗತ್ಯವಿರುವ ದಾಖಲೆಗಳು
- ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (RD Number ಇರಬೇಕು).
- 5ನೇ ತರಗತಿಯ ಅಂಕಪಟ್ಟಿ ಅಥವಾ ವ್ಯಾಸಂಗ ದೃಢೀಕರಣ ಪತ್ರ.
- ಆಧಾರ್ ಕಾರ್ಡ್ (ವಿದ್ಯಾರ್ಥಿ ಮತ್ತು ಪೋಷಕರದ್ದು).
- ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
ಅರ್ಹತೆ: ವಿದ್ಯಾರ್ಥಿಯು ಕಡ್ಡಾಯವಾಗಿ ಪರಿಶಿಷ್ಟ ಪಂಗಡಕ್ಕೆ (ST) ಸೇರಿದವರಾಗಿರಬೇಕು.2025-26ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು.ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷರೂ. ಮೀರಬಾರದು.
ಆಯ್ಕೆ ವಿಧಾನ: ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ಪ್ರವೇಶ ಪರೀಕ್ಷೆಯ (Entrance Test) ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳು:
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತ ಶಿಕ್ಷಣದ ಜೊತೆಗೆ ವಸತಿ, ಊಟ, ಪಠ್ಯಪುಸ್ತಕ ಮತ್ತು ಸಮವಸ್ತ್ರ ಸೌಲಭ್ಯಗಳನ್ನು ಸರ್ಕಾರವೇ ಭರಿಸಲಿದೆ.
ಹೆಚ್ಚಿನ ಮಾಹಿತಿಗಾಗಿ: ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ swd.karnataka.gov.in ಗೆ ಭೇಟಿ ನೀಡಬಹುದು ಅಥವಾ ನಿಮ್ಮ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.


