HomeKarnatakaಗ್ಯಾಸ್ ಇಲ್ಲ ಎಂಬ ಸಂದೇಶ: ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಗ್ಯಾಸ್ ಇಲ್ಲ ಎಂಬ ಸಂದೇಶ: ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗ್ಯಾಸ್ ಪೆಟ್ರೋಲ್ ಮತ್ತು ಡಿಸೇಲ್‌ ಕೊರತೆಯಾಗಲಿದೆ ಎಂಬ ವದಂತಿಗಳು ಹರಡುತ್ತಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬಾರದು ಎಂದು ಜಿಲ್ಲಾಡಳಿತ ಕರೆ ನೀಡಿದೆ.

ಈ ಮಾದರಿಯ ಸುಳ್ಳು ಸುದ್ದಿಗಳನ್ನು ಹರಡುವ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ. ಸಮಾಜದಲ್ಲಿ ಅಶಾಂತಿ ಮತ್ತು ಅಭದ್ರತೆ ಮೂಡಿಸುವ ನಿಟ್ಟಿನಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು. ಪ್ರತಿಯೊಂದು ಪೋಸ್ಟ್ ಮೇಲೆ ನಮ್ಮ ಸೋಷಿಯಲ್ ಮೀಡಿಯಾ ವಿಂಗ್ ಕಣ್ಣಿಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಾದ್ಯಂತ ಇಂದೇ ಆಮದು ನಿಂತರೂ ಸಹ ಮುಂದಿನ 4-5 ತಿಂಗಳವರೆಗೆ ಇಂಧನ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ಪ್ರಧಾನ ಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಜಿಲ್ಲಾಡಳಿತ ಹೇಳಿದೆ.

ಬಂಕ್‌ಗಳಿಗೆ ಸೂಚನೆ: ಯಾವುದೇ ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯಾನು ಅಥವಾ ಟ್ಯಾಂಕ್‌ಗಳ ಮೂಲಕ ಅನಗತ್ಯವಾಗಿ ಇಂಧನ ಮಾರಾಟ ಮಾಡದಂತೆ ನಿರ್ದೇಶನ ನೀಡಲಾಗಿದೆ. ಜನರು ಆತಂಕದಿಂದ ಇಂಧನ ತುಂಬಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕರೆ ನೀಡಲಾಗಿದೆ.

ಸಾರ್ವಜನಿಕರು ಕೇವಲ ಸರ್ಕಾರ ಮತ್ತು ತೈಲ ಕಂಪನಿಗಳ (BPCL, HPCL, IOCL) ಅಧಿಕೃತ ಹೇಳಿಕೆಗಳನ್ನು ಮಾತ್ರ ನಂಬಬೇಕು. ಸುಖಾಸುಮ್ಮನೆ ಆತಂಕಕ್ಕೆ ಒಳಗಾಗಿ ಇಂಧನ ಸಂಗ್ರಹ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಸಾರ್ವಜನಿಕರು ಅಡುಗೆ ಅನಿಲದ ಬಳಕೆಯನ್ನು ಮಿತವಾಗಿ ಬಳಸಬೇಕು ಹಾಗೂ ಪರ್ಯಾಯ ಇಂಧನವಾಗಿ ಜೈವಿಕ ಅನಿಲ (ಬೈಯೋ ಗ್ಯಾಸ್) ಬಳಕೆಗೆ ಹೆಚ್ಚಿನ ಒತ್ತು ನೀಡಬೇ̧ಕು ಇತ್ತೀಚಿನ ದಿನಗಳಲ್ಲಿ ಇಂಧನದ ಬಳಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಸಿಲಿಂಡರ್ ಗ್ಯಾಸ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಸ್ವಾವಲಂಬಿಗಳಾಗಲು ಬೈಯೋ ಗ್ಯಾಸ್ ಘಟಕಗಳನ್ನು ಸ್ಥಾಪಿಸಿಕೊಳ್ಳುವುದು ಸೂಕ್ತವಾಗಿದೆ.

ಈ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಆರ್ಥಿಕ ಉಳಿತಾಯವನ್ನೂ ಮಾಡಬಹುದು. ಜೈವಿಕ ಅನಿಲ ಘಟಕಗಳನ್ನು ಅಳವಡಿಸಿಕೊಳ್ಳುವ ಆಸಕ್ತ ಗ್ರಾಹಕರಿಗೆ ಸರ್ಕಾರದ ವತಿಯಿಂದ ನಿಯಮಾನುಸಾರ ಸಹಾಯಧನ ಸೌಲಭ್ಯವೂ ಲಭ್ಯವಿರಲಿದೆ. ಇದರಿಂದ ಗ್ರಾಹಕರಿಗೆ ಆರಂಭಿಕ ವೆಚ್ಚದ ಹೊರೆ ತಗ್ಗಲಿದ್ದು, ದೀರ್ಘಕಾಲದವರೆಗೆ ಉಚಿತವಾಗಿ ಇಂಧನ ಪಡೆಯಲು ಸಾಧ್ಯವಾಗುತ್ತದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular