HomeKarnatakaಮಾರಣಾಂತಿಕ ಕಾಯಿಲೆಯಿಂದ 15 ಹಸು ಸಾವು: ಸಾಲಬಾಧೆಯಿಂದ ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ಮಾರಣಾಂತಿಕ ಕಾಯಿಲೆಯಿಂದ 15 ಹಸು ಸಾವು: ಸಾಲಬಾಧೆಯಿಂದ ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ತುಮಕೂರು: ಹೈನುಗಾರಿಕೆಯಲ್ಲಿ ನಷ್ಟ ಉಂಟಾಗಿ ವಿಪರೀತ ಸಾಲ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿಯಲ್ಲಿ ನಡೆದಿದೆ.

ರಮೇಶ್(49) ಆತ್ಮಹತ್ಯೆ ಮಾಡಿಕೊಂಡವರು. ಕೃಷಿಯೊಂದಿಗೆ ಹೈನುಗಾರಿಕೆ ಮಾಡಲು ಮೈಕ್ರೋ ಫೈನಾನ್ಸ್ ಸೇರಿದಂತೆ ವಿವಿಧೆಡೆ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಮೂರ್ನಾಲ್ಕು ವರ್ಷಗಳಿಂದ ಪತ್ನಿ ಹಾಗೂ ತಮ್ಮ ಹೆಸರಲ್ಲಿ ಅವರು ಸಾಲ ಪಡೆದು 20 ಹಸುಗಳನ್ನು ಸಾಕುತ್ತಿದ್ದರು.

ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ರಮೇಶ್ ಅವರಿಗೆ ಸೇರಿದ 15 ಹಸುಗಳು ಮಾರಣಾಂತಿಕ ಕಾಯಿಲೆ ಮತ್ತು ರೋಗಗಳ ಕಾರಣ ಸಾವನಪ್ಪಿವೆ. ಇದರ ಪರಿಣಾಮ ಸಾಲದ ಕಂತುಗಳನ್ನು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋನಿಗರಹಳ್ಳಿ ಗ್ರಾಮದ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular