ಮಂಗಳೂರು: ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ಘಟನೆ ನಡೆದಿದೆ.
ಟ್ಯಾಬ್ಲೆಟ್ ಆರಿಫ್(46) ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಆತನನ್ನು ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆರಿಫ್ ನನ್ನು ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಆರಿಫ್ ಗೆ ಹಿಂಬದಿಯಿಂದ ಕಾರ್ ನಲ್ಲಿ ಡಿಕ್ಕಿ ಹೊಡೆಸಲಾಗಿದೆ. ಈ ವೇಳೆ ಕೆಳಗೆ ಬಿದ್ದ ಆರಿಫ್ ಮೇಲೆ ದಾಳಿ ಮಾಡಲಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಆರಿಫ್ ಕೊಲೆ ಮಾಡಿ ಕಾರ್ ನಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

