HomeLatest NewsBREAKING : ಬೆಂಗಳೂರಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಗ್ನಿ ಅವಘಡ ; ಚಾಲಕ ಸಜೀವ...

BREAKING : ಬೆಂಗಳೂರಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಗ್ನಿ ಅವಘಡ ; ಚಾಲಕ ಸಜೀವ ದಹನ.!

ಬೆಂಗಳೂರು: ಸಿಲಿಕಾನ್ ಸಿಟಿಯ ಕುರುಬರಹಳ್ಳಿಯಲ್ಲಿ ಆಘಾತಕಾರಿ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಚಾಲಕ ಬೆಂಕಿಗಾಹುತಿಯಾಗಿ ಸಜೀವ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ.

ಘಟನೆಯ ವಿವರ

ಕುರುಬರಹಳ್ಳಿ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕಾರು ಲಾರಿಯ ಅಡಿಗೆ ನುಗ್ಗಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ. ಕಾರಿನಲ್ಲಿದ್ದ ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರ ಗುರುತು

ಮೃತ ಯುವಕನನ್ನು ಕಲಬುರಗಿ ಮೂಲದ ಅಂಬದಾಸ್ (23) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಂಬದಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ

ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular