HomeKarnatakaಇಂದಿನಿಂದ ಮಾರ್ಚ್ 29ರವರೆಗೆ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

ಇಂದಿನಿಂದ ಮಾರ್ಚ್ 29ರವರೆಗೆ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವದ ಹಿನ್ನೆಲೆಯಲ್ಲಿ ಮೂರು ದಿನಗಲ ಕಾಲ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಇಂದಿನಿಂದ ಮಾರ್ಚ್ 29 ರವರೆಗೆ ಮೈಸೂರು ರಸ್ತೆಯಲ್ಲಿ ಸಂಚಾರ ವ್ಯವಸ್ಥೆಯನ್ನು ಮಾರ್ಪಾಡು ಮಾಡಲಾಗಿದೆ. ಮಜೆಸ್ಟಿಕ್, ಸಿಟಿ ಮಾರ್ಕೆಟ್ ಮತ್ತು ಕೆಂಗೇರಿ ಕಡೆಯಿಂದ ಬರುವ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದ್ದು, ಪ್ರಯಾಣದ ಮೊದಲು ಮಾರ್ಗಸೂಚಿ ಗಮನಕ್ಕೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ಮಾರ್ಪಾಡು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಭಾರೀ ವಾಹನಗಳಿಗೆ ಸೂಚನೆ: ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವ ಭಾರೀ ವಾಹನಗಳನ್ನು ಹೊರತುಪಡಿಸಿ, ಉಳಿದ ವಾಹನಗಳಿಗೆ ಎಂದಿನಂತೆ ಸಂಚರಿಸಲು ಅವಕಾಶ ನೀಡಲಾಗಿದೆ.
ಮಾರ್ಚ್ 27ರ ಬೆಳಿಗ್ಗೆ 07 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ಪರ್ಯಾಯ ಮಾರ್ಗಗಳು:
ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್‌ನಿಂದ ಮೈಸೂರು ರಸ್ತೆ ಕಡೆಗೆ ಹೋಗುವವರು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ತಲುಪಬೇಕು. ಅಲ್ಲಿಂದ ಎಡ ತಿರುವು ಪಡೆದು ಕೆ.ಇ.ಬಿ. ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು (ದೇವೇಗೌಡ ಸರ್ಕಲ್) ಮುಖಾಂತರ ನಾಯಂಡಹಳ್ಳಿ ಹತ್ತಿರ ಮೈಸೂರು ರಸ್ತೆಯನ್ನು ಸೇರಬಹುದು.

ಮೈಸೂರು ರಸ್ತೆ ಮೇಲ್ಸೇತುವೆ ಬಳಸುವ ಸರಕು ವಾಹನಗಳು ಮೈಸೂರು ರಸ್ತೆ ವೆಟನರಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಗುಡ್ ಶೆಡ್ ರಸ್ತೆ ಮೂಲಕ ಶಾಂತಲಾ ಜಂಕ್ಷನ್ – ಕೋಡೆ ಸರ್ಕಲ್ – ಲುಲು ಮಾಲ್ – ಹುಣಸೇಮರ ಜಂಕ್ಷನ್ ಮೂಲಕ ಮಾಗಡಿ ರಸ್ತೆಯತ್ತ ಸಂಚರಿಸಬಹುದು.

ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವವರು (ಮಾರ್ಚ್ 28-29ರ ವಿಶೇಷ ಸೂಚನೆ) ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆಯಬೇಕು. ಚಂದ್ರಾ ಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆ ಮುಖಾಂತರ ಎಂ.ಸಿ. ಸರ್ಕಲ್ ತಲುಪಿ ಮಾಗಡಿ ರಸ್ತೆ ಸೇರಬಹುದು.

ರಥೋತ್ಸವದ ಸಮಯದಲ್ಲಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಹಾಗೂ ಅನಿವಾರ್ಯವಿದ್ದಲ್ಲಿ ಮಾತ್ರ ಈ ರಸ್ತೆಯನ್ನು ಬಳಸುವಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular