HomeKarnatakaಬೆಂಗಳೂರು: ಪಾಠ ಮಾಡುತ್ತಿದ್ದಾಗಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರೊಫೆಸರ್ ಅರೆಸ್ಟ್

ಬೆಂಗಳೂರು: ಪಾಠ ಮಾಡುತ್ತಿದ್ದಾಗಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರೊಫೆಸರ್ ಅರೆಸ್ಟ್

ಬೆಂಗಳೂರು: ಪ್ರಾಧ್ಯಾಪಕನೊಬ್ಬ ಕ್ಲಾಸ್ ನಲ್ಲಿ ಪಾಠ ಮಾಡುತ್ತಿದ್ದಗಲೇ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದು, ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಘಾ ಥಳಿತಕ್ಕೊಳಗಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ.ಬೇಗೂರು ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಪ್ರೊಫೆಸರ್ ಅಬ್ದುಲ್ ರೆಹಮಾನ್ ಷರೀಫ್ ಎಂಬಾತ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಅಬ್ದುಲ್ ವರ್ತನೆಗೆ ಸಿಡಿದೆದ್ದ ವಿದ್ಯಾರ್ಥಿಗಳು ಆತನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಪ್ರಾಧ್ಯಾಪಕ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಕ್ರೋಬಯಾಲಾಜಿ ವಿಷಯದ ಪ್ರಾಧ್ಯಾಪಕ ನೆಲಮಂಗಲ ನಿವಾಸಿ ಅಬ್ದುಲ್, ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದು, ನಂತರ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಾಳೆ.

ಮಾರ್ಚ್ 23ರಂದು ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಡಾ. ಅಬ್ದುಲ್ ರೆಹಮಾನ್ ಷರೀಫ್ ಕ್ಲಾಸ್ ನಲ್ಲಿ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದಳು. ಈ ಹಿಂದೆ ನೀನು ನನಗೆ ಪ್ರಪೋಸ್​ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿದೆ ಎಂದಿದ್ದಾನೆ. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸು ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಪ್ರಾಧ್ಯಾಪಕ​ ಕ್ಲಾಸ್​​ನಿಂದ ಹೊರಗೆ ಹೋಗಿದ್ದಾನೆ. ಈ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಬ್ದುಲ್ ನನ್ನು ಕಾಲೇಜು ಕ್ಯಾಂಪಸ್‌ನಲ್ಲಿಯೇ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಅಲ್ಲದೇ ಸ್ವತಃ ವಿದ್ಯಾರ್ಥಿನಿ ಚಪ್ಪಲಿಯಿಂದ ಥಳಿಸಿದ್ದಾಳೆ. ವಿದ್ಯಾರ್ಥಿಗಳಿಂದ ಧರ್ಮದೇಟು ತಿಂದ ಬಳಿಕ ಅಬ್ದುಲ್ ಅಲ್ಲಿಂದ ಓಡಿ ಹೋಗಿದ್ದಾನೆ. ಘಟನೆ ನಂತರ ಕಾಲೇಜು ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ನೆಲಮಂಗಲ ಗ್ರಾಮಾಂತರ ಪೊಲೀಸರು ಕಾಲೇಜಿಗೆ ಭೇಟಿ ನೀಡಿದ್ದು, ಘಟನೆ ಕುರಿತು ವಾಸ್ತವಾಂಶಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪ್ರಾಧ್ಯಾಪಕ ಅಬ್ದುಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಸದ್ಯ ಆತನನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular