HomeLatest Newsಹಿರಿಯ ನಟಿ ಗಿರಿಜಾ ಲೋಕೇಶ್ ಗೆ ವರನಟ ಡಾ. ರಾಜ್ ಕುಮಾರ್ ಪ್ರಶಸ್ತಿ

ಹಿರಿಯ ನಟಿ ಗಿರಿಜಾ ಲೋಕೇಶ್ ಗೆ ವರನಟ ಡಾ. ರಾಜ್ ಕುಮಾರ್ ಪ್ರಶಸ್ತಿ

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ವತಿಯಿಂದ ಕೊಡ ಮಾಡುವ 2026 ನೇ ಸಾಲಿನ ವರನಟ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ, ರಂಗಭೂಮಿ ಕಲಾವಿದೆ ಗಿರಿಜಾ ಲೋಕೇಶ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಫಲಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಏಪ್ರಿಲ್ 13ರಂದು ಸಂಜೆ 5:15ಕ್ಕೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬೆಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ, ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಅಧ್ಯಕ್ಷತೆ ವಹಿಸಲಿದ್ದಾರೆ. ನವಯುಗ ಹೋಟೆಲ್ ಮಾಲೀಕ ಕೆ. ಮೋಹನರಾವ್ ಉಪಸ್ಥಿತರಿರುವರು ಎಂದು ಕನ್ನಡ ಜನಶಕ್ತಿ ಕೇಂದ್ರ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular