ಕೋಲಾರ: ಕೋಲಾರ ಜಿಲ್ಲೆಯಲ್ಲಿರುವ 18 ಡೇರಿಗಳ ಹಾಲಿನ ಮಾದರಿಯಲ್ಲಿ ಕಲಬೆರಕೆ ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲಾ ಕೇಂದ್ರಗಳನ್ನು ಮುಚ್ಚಿ ಎಫ್ಎಸ್ಎಸ್ಎಐ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹಾಲು ಕಲಬೆರಕೆ ದಂಧೆಗೆ ಕಡಿವಾಣ ಹಾಕುವ ಉದ್ದೇಶದಿಂದ ಫೆಬ್ರವರಿ 5ರಂದು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ವಿವಿಧೆಡೆ ದಾಳಿ ನಡೆಸಿ 48 ಹಾಲಿನ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಪರೀಕ್ಷೆಯಲ್ಲಿ ಕಲಬೆರೆಕೆ ದೃಢಪಟ್ಟ ಹಿನ್ನೆಲೆಯಲ್ಲಿ ಕಲಬೆರಕೆ ದಂಧೆಯಲ್ಲಿ ತೊಡಗಿಕೊಂಡಿದ್ದ ಕೇಂದ್ರಗಳಿಗೆ ಈಗ ಬೀಗ ಹಾಕಲಾಗಿದೆ. ಗುಣಮಟ್ಟ ಇಲ್ಲದ ಹಾಲು ಸರಬರಾಜು ಮಾಡುವ ಖಾಸಗಿ ಡೇರಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರವಿ ತಿಳಿಸಿದ್ದಾರೆ.

