HomeKarnatakaBREAKING : ಬೆಂಗಳೂರಿನಲ್ಲಿ ಇಂದು CM ಸಿದ್ದರಾಮಯ್ಯ ಕರೆದಿದ್ದ ಸುದ್ದಿಗೋಷ್ಟಿ ಧಿಡೀರ್ ರದ್ದು.!

BREAKING : ಬೆಂಗಳೂರಿನಲ್ಲಿ ಇಂದು CM ಸಿದ್ದರಾಮಯ್ಯ ಕರೆದಿದ್ದ ಸುದ್ದಿಗೋಷ್ಟಿ ಧಿಡೀರ್ ರದ್ದು.!

ಮೈಸೂರು  : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 28, 2026) ಬೆಂಗಳೂರಿನಲ್ಲಿ ನಡೆಸಬೇಕಿದ್ದ ಮಹತ್ವದ ಸುದ್ದಿಗೋಷ್ಠಿಯನ್ನು ದಿಢೀರ್ ಆಗಿ ರದ್ದುಗೊಳಿಸಿದ್ದಾರೆ.ಬೆಂಗಳೂರಿನ ಬದಲು ಮೈಸೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮಧ್ಯಾಹ್ನ 12:30ಕ್ಕೆ ಸಿಎಂ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದರು.ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಲು ಸಿದ್ಧತೆ ನಡೆಸಲಾಗಿತ್ತು .   ಆದರೆ, ಕೊನೆಯ ಕ್ಷಣದಲ್ಲಿ ಸುದ್ದಿಗೋಷ್ಠಿ ರದ್ದಾಗಿರುವುದು ಹಲವು ಕುತೂಹಲಗಳಿಗೆ ಮತ್ತು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಕೇಂದ್ರ ಸರ್ಕಾರದ ಧೋರಣೆಗಳನ್ನು ಖಂಡಿಸಿ ಹಾಗೂ ರಾಜ್ಯದಲ್ಲಿ ಎದುರಾಗಿರುವ ಪೆಟ್ರೋಲ್, ಡೀಸೆಲ್ ಮತ್ತು ಸಿಲಿಂಡರ್ ಕೊರತೆಯ ಬಗ್ಗೆ ಮಾಹಿತಿ ನೀಡಲು ಸಿಎಂ ಸಜ್ಜಾಗಿದ್ದರು.

ರದ್ದತಿಗೆ ಕಾರಣ: ಸುದ್ದಿಗೋಷ್ಠಿಯನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲು ನಿಖರ ಕಾರಣ ತಿಳಿದುಬಂದಿಲ್ಲವಾದರೂ, ರಾಜ್ಯಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಇಂಧನ ನೀತಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದನ್ನು ಅವರು ಈಗಾಗಲೇ ಕೇಂದ್ರದ ಗಮನಕ್ಕೆ ತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರವು ದೇಶೀಯ ಬಳಕೆಯ ಗ್ಯಾಸ್ ಪೂರೈಕೆಗೆ ಆದ್ಯತೆ ನೀಡುತ್ತಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಇಂದು ಸಿಎಂ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆಯಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular