HomeKarnatakaಅಂಗನವಾಡಿ ಕಾರ್ಯಕರ್ತೆ , ಸಹಾಯಕಿ  ಹುದ್ದೆಗಳ ನೇಮಕಾತಿಗೆ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ  ಹುದ್ದೆಗಳ ನೇಮಕಾತಿಗೆ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು : ಶಿಶು ಅಭಿವೃದ್ಧಿ ಬೆಂಗಳೂರು ರಾಜ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳ ಗೌರವಧನ ಆಧಾರಿತ ಮೇಲೆ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 56 ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಏಪ್ರಿಲ್ 06 ಸಂಜೆ 5.30 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಿಬಿಎಂಪಿ ಕಟ್ಟಡ, ಮೊದಲಬೇ ಮಹಡಿ, ಎನ್.ಆರ್.ಕಾಲೋನಿ, ಬೆಂಗಳೂರು-19 ಇಲ್ಲಿ ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ 080- 26601917 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ರಾಜ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ನಾಗವಾರ ಪ್ರದೇಶದ ಒಟ್ಟು ಪಡಿತರ ಚೀಟಿ- 800 ಹಾಗೂ ಮಂಜುನಾಥನಗರ ಪ್ರದೇಶದ ಒಟ್ಟು ಪಡಿತರ ಚೀಟಿ- 892. ಯಲಹಂಕ ತಾಲ್ಲೂಕಿನ ಕೋಗಿಲು ಪ್ರದೇಶದ ಒಟ್ಟು ಪಡಿತರ ಚೀಟಿ- 819, ದೊಡ್ಡಬೆಟ್ಟಹಳ್ಳಿ ಪ್ರದೇಶದ ಒಟ್ಟು ಪಡಿತರ ಚೀಟಿ- 935 ಹಾಗೂ ವಡೇರಹಳ್ಳಿ (ಗ್ರಾಮೀಣ ಪ್ರದೇಶ) ಒಟ್ಟು ಪಡಿತರ ಚೀಟಿ- 611 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಏಪ್ರಿಲ್ 27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular