ಬೆಂಗಳೂರು: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಸುರೇಶ್(21), ನರಸೀಗೌಡ(22) ಮೃತಪಟ್ಟವರು ಎಂದು ಹೇಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಈಜಲು ತೆರಳಿದ್ದ ನಾಲ್ವರ ಪೈಕಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ನೆಲಮಂಗಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

