HomeKarnatakaಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಆರು ವರ್ಷದ ಬಾಲಕಿಯ ಬರ್ಬರ ಹತ್ಯೆ: ಶವವನ್ನು ನೀಲಗಿರಿ ತೋಪಿನಲ್ಲಿ...

ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಆರು ವರ್ಷದ ಬಾಲಕಿಯ ಬರ್ಬರ ಹತ್ಯೆ: ಶವವನ್ನು ನೀಲಗಿರಿ ತೋಪಿನಲ್ಲಿ ಬಿಸಾಕಿ ದುಷ್ಕರ್ಮಿಗಳು ಪರಾರಿ

ಬೆಂಗಳೂರು: ಆರು ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದುರುವ ದುಷ್ಕರ್ಮಿಗಳು ಶವವನ್ನು ನೀಲಗಿರಿ ತೋಪಿನಲ್ಲಿ ಬಿಸಾಕಿ ಹೋಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಸ್ಸಾಂ ಮೂಲದ ದಂಪತಿಯ ಪುತ್ರಿ ಕೊಲೆಯಾದವಳು. ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆಗೈಯಲಾಗಿದೆ. ವಿಠಸಂದ್ರದ ನೀಲಗಿರಿ ತೋಪಿನಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಅಸ್ಸಾಂ ಮೂಲದ ವ್ಯಕ್ತಿಯು ಒಂದು ವರ್ಷದ ಹಿಂದೆ ಪತ್ನಿ ಮತ್ತು ಪುತ್ರಿ ಜತೆ ಬೆಂಗಳೂರಿಗೆ ಬಂದಿದ್ದು, ವಿಠಸಂದ್ರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದು, ಸಮೀಪದ ಗೋಡೌನ್‌ವೊಂದರಲ್ಲಿ ವಾಸವಾಗಿದ್ದರು. ಎರಡು ದಿನಗಳಿಂದ ಬಾಲಕಿ ನಾಪತ್ತೆಯಾಗಿದ್ದಳು. ಕುಟುಂಬ ಸದಸ್ಯರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದ್ರೆ ಅವರ ಮಗಳು ಎಲ್ಲಿಯೂ ಪತ್ತೆಯಾಗಿರಲಿಲ್ಲ. ಬಳಿಕ ಶುಕ್ರವಾರ ಮಧ್ಯಾಹ್ನ ಬಾಲಕಿಯ ತಂದೆ ಪೊಲೀಸ್​ ಠಾಣೆಗೆ ಬಂದು ಪುತ್ರಿ ನಾಪತ್ತೆ ಬಗ್ಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯರೊಬ್ಬರು ಪೊಲೀಸರಿಗೆ ಕರೆ ಮಾಡಿನ್ವಿಠಸಂದ್ರದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿ, ಕುತ್ತಿಗೆ ಬಿಗಿದು ಕೊಲೆಗೈದು ಶವವನ್ನು ನೀಲಗಿರಿ ತೋಪಿನಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ಗೊತ್ತಾಗಿದೆ.

ಯಾವುದೋ ದ್ವೇಷದಿಂದ ಪರಿಚಯಸ್ಥರೇ ಕೊಲೆಗೈದಿರಬಹುದು ಎಂಬ ಅನುಮಾನವಿದ್ದು, ತನಿಖೆ ನಡೆಯುತ್ತಿದೆ. ವೈದ್ಯಕೀಯ ಪರೀಕ್ಷೆ ಪ್ರಕಾರ, ಬಾಲಕಿ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಆಗಿಲ್ಲ ಎಂಬುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular