ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಹೋಗುವ ಜನರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಗುಡ್‌ನ್ಯೂಸ್ ನೀಡಿದೆ. ಬೆಂಗಳೂರು-ದಾಂಡೇಲಿ ನಡುವೆ ನಾನ್ ಎಸಿ ಸ್ಲೀಪರ್ ಬಸ್ ‘ಪಲ್ಲಕ್ಕಿ’ ಸೇವೆಯನ್ನು ಆರಂಭಿಸಿದೆ.
ದಾಂಡೇಲಿ-ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನಡುವಿನ ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇಂದು ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ನೂತನ ಪಲ್ಲಕ್ಕಿ ಹವಾನಿಯಂತ್ರಣ ರಹಿತ ಎರಡು ಬಸ್ ಸೇವೆಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದೆನು ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ನಮ್ಮ ಸರ್ಕಾರದ ಪ್ರಮುಖ ಗುರಿ ಸಾರ್ವಜನಿಕರಿಗೆ ಸುಕ್ಷೇಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯ ಒದಗಿಸುವುದಾಗಿದೆ. ಈ ಭಾಗದ ಉದ್ಯೋಗಿಗಳು, ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಈ ಬಸ್ ಸೇವೆಗಳು ಅತ್ಯಂತ ಆರಾಮದಾಯಕ ಪ್ರಯಾಣದ ಅನುಭವ ನೀಡಲಿವೆ ಎಂದು ತಿಳಿಸಿದ್ದಾರೆ.
ಪಲ್ಲಕ್ಕಿ ಸರಣಿಯ ಈ ಬಸ್‌ಗಳು ರಾಜಧಾನಿ ಬೆಂಗಳೂರಿಗೆ ಮಾತ್ರವಲ್ಲದೆ, ನೆರೆಯ ಜಿಲ್ಲೆಗಳ ನಡುವಿನ ಸಂಪರ್ಕವನ್ನೂ ವೃದ್ಧಿಸಲಿದ್ದು, ಈ ಭಾಗದ ಆರ್ಥಿಕ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಿವೆ.
ಮುಂಗಡ ಟಿಕೆಟ್ ಕಾಯ್ದಿರಿಸಲು ಜನರು ಕೆಎಸ್ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಿಬಹುದು.

