HomeKarnatakaಗ್ಯಾಸ್ ಸಿಲಿಂಡರ್ ಬುಕಿಂಗ್ ಗೆ ಕಟ್ಟುನಿಟ್ಟಿನ ನಿಯಮ: ನಗರ ಪ್ರದೇಶ ಗ್ರಾಹಕರಿಗೆ 25 ದಿನ, ಗ್ರಾಮೀಣ...

ಗ್ಯಾಸ್ ಸಿಲಿಂಡರ್ ಬುಕಿಂಗ್ ಗೆ ಕಟ್ಟುನಿಟ್ಟಿನ ನಿಯಮ: ನಗರ ಪ್ರದೇಶ ಗ್ರಾಹಕರಿಗೆ 25 ದಿನ, ಗ್ರಾಮೀಣ ಭಾಗದಲ್ಲಿ 45 ದಿನಗಳಿಗೊಮ್ಮೆ ಸಿಲಿಂಡರ್

ಬೆಂಗಳೂರು: ನಗರ ಪ್ರದೇಶದ ಗ್ರಾಹಕರಿಗೆ 25 ದಿನಗಳ ನಂತರ, ಗ್ರಾಮೀಣ ಪ್ರದೇಶ ಗ್ರಾಹಕರಿಗೆ 45 ದಿನಗಳಿಗೊಮ್ಮೆ ಸಿಲಿಂಡರ್ ನೀಡಬೇಕು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ಗ್ಯಾಸ್ ಸಿಲಿಂಡರ್ ಬುಕಿಂಗ್ ಗೆ ಕಟ್ಟುನಿಟ್ಟಿನ ನಿಯಮದ ಬಗ್ಗೆ ಸಚಿವರು ಮಾಹಿತಿ ನೀಡಿದ್ದು, ಎಲ್ಲಾ ಗ್ಯಾಸ್ ಏಜೆನ್ಸಿಗಳು ಈ ನಿಯಮಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ನಿಗದಿತ ದಿನಗಳ ನಂತರವೂ ಸಿಲಿಂಡರ್ ಬುಕ್ ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಸತಾಯಿಸಿದಲ್ಲಿ ನೇರವಾಗಿ ಆಯಾ ಗ್ಯಾಸ್ ಪೂರೈಕೆ ಕಂಪನಿಗಳಿಗೆ ಗ್ರಾಹಕರು ದೂರು ನೀಡಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ.

ರಾಜ್ಯದ ಹೋಟೆಲ್ ಗಳಲ್ಲಿ ಉಂಟಾದ ವಾಣಿಜ್ಯ ಸಿಲಿಂಡರ್ ಅಭಾವಕ್ಕೆ ಶೀಘ್ರವೇ ಪರಿಹಾರ ಸಿಗಲಿದೆ. ಹೋಟೆಲ್ ಮಾಲೀಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಆದೇಶ ಹೊರ ಬಿದ್ದಿದ್ದು, ಭರವಸೆ ನೀಡಿದಂತೆ ಮಂಗಳವಾರ ಹೋಟೆಲ್ ಗಳಿಗೆ 17500 ಸಿಲಿಂಡರ್ ಗಳು ವಿತರಣೆಯಾಗಲಿವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಮಸ್ಯೆಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ. ಈಗ ಉಂಟಾಗಿರುವ ತೀವ್ರ ಅಭಾವದ ಬಗ್ಗೆ ಕೇಂದ್ರ ಸರ್ಕಾರ ಮೌನ ಮುರಿಯಬೇಕು. ಪ್ರಧಾನಿ ಮತ್ತು ಪೆಟ್ರೋಲಿಯಂ ಸಚಿವರು ಈ ಬಗ್ಗೆ ಮಾತನಾಡಬೇಕು. ಹೋಟೆಲ್ ಉದ್ಯಮಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular