ಮಂಗಳೂರು: ಅಪಾರ್ಟ್ಮೆಂಟ್ ನ 12ನೇ ಮಹಡಿಯಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅತ್ತಾವರದ ಪಿಜಿಯಲ್ಲಿ ವಾಸವಾಗಿದ್ದ ಸಾರ್ಥಕ್ ತನ್ನ ಗೆಳತಿ ವಾಸವಾಗಿದ್ದ ಅಪಾರ್ಟ್ಮೆಂಟ್ ಗೆ ಬಂದಿದ್ದ. 12ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾರ್ಚ್ 31ರಂದು ಪರೀಕ್ಷೆ ಇತ್ತು. ಆತ್ಮಹತ್ಯೆಗೆ ಪರೀಕ್ಷೆ ಭಯವೇ ಅಥವಾ ಪ್ರೇಮ ವೈಫಲ್ಯ ಕಾರಣವೇ ಎನ್ನುವ ಶಂಕೆ ವ್ಯಕ್ತವಾಗಿದೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

