HomeLatest NewsSHOCKING : ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ : ಪತಿ ಶವ ಕಂಡು ಕಟ್ಟಡದಿಂದ ಜಿಗಿದು...

SHOCKING : ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ : ಪತಿ ಶವ ಕಂಡು ಕಟ್ಟಡದಿಂದ ಜಿಗಿದು ಪತ್ನಿ ಸೂಸೈಡ್.!

ಬೆಂಗಳೂರು :   ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಬಾಬು ರೆಡ್ಡಿ ಹಾಗೂ ಸಾಜಿಯಾ ಮೃತಪಟ್ಟವರು. ಮೊದಲು ಪತಿ ಬಾಬು ರೆಡ್ಡಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಕಂಡು ಮನನೊಂದ ಪತ್ನಿ ಸಾಜಿಯಾ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.

ಕಲಹ ಮತ್ತು ಮಾನಸಿಕ ಒತ್ತಡ: ದಂಪತಿಗಳಿಬ್ಬರೂ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ಸಮಯದಿಂದ ಇವರ ನಡುವೆ ಪದೇ ಪದೇ ಜಗಳಗಳಾಗುತ್ತಿದ್ದವು ಎನ್ನಲಾಗಿದೆ. ಅಲ್ಲದೆ ಇಬ್ಬರೂ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ವಿವರ : ಸೋಮವಾರವೂ ಇಬ್ಬರ ನಡುವೆ ಜಗಳ ನಡೆದಿತ್ತು. ಪತ್ನಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಗೆ ಬಂದ ಸಾಜಿಯಾ ಪತಿಯ ಮೃತದೇಹವನ್ನು ಕಂಡು ತೀವ್ರ ಆಘಾತಕ್ಕೊಳಗಾಗಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸ್ ಕ್ರಮ: ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular