HomeLatest Newsಎಲ್ ಪಿಜಿ ಸಿಲಿಂಡರ್ ಅಕ್ರಮ ಸಂಗ್ರಹ, ದುಪ್ಪಟ್ಟು ಬೆಲೆ ಮಾರಾಟ: 9 ಸಿಲಿಂಡರ್ ಜಪ್ತಿ; ಓರ್ವ...

ಎಲ್ ಪಿಜಿ ಸಿಲಿಂಡರ್ ಅಕ್ರಮ ಸಂಗ್ರಹ, ದುಪ್ಪಟ್ಟು ಬೆಲೆ ಮಾರಾಟ: 9 ಸಿಲಿಂಡರ್ ಜಪ್ತಿ; ಓರ್ವ ಅರೆಸ್ಟ್

ಬಳ್ಳಾರಿ: ಅಕ್ರಮವಾಗಿ ಅಎಲ್ ಪಿಜಿ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 9 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ.

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಎಲ್​ಪಿಜಿ ಸಮಸ್ಯೆ ಹಲವೆಡೆ ಉಲ್ಬಣಿಸಿದೆ. ಅಡುಗೆ ಅನಿಲ ಸಿಲಿಂಡರ್ ಕೊರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ದುರ್ಲಾಭ ಪಡೆಯಲು ಕೆಲವರು ಅಡ್ಡದಾರಿ ಹಿಡಿದಿದ್ದಾರೆ. ಎಲ್​ಪಿಜಿ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಕಾಳ ಸಂತೆಯಲ್ಲಿ ಹೆಚ್ಚಿನ ದರಕ್ಕೆ ಸಿಲಿಂಡರ್ ಮಾರಾಟ ಮಾಡುವ ಬಗ್ಗೆ ಮಾಹಿತಿ ಪಡೆದ ಬಳ್ಳಾರಿ ಗ್ರಾಮೀಣ ಪೊಲೀಸರು, ಆಹಾರ ಇಲಾಖೆಯ ಅಧಿಕಾರಿಗಳ ಜೊತೆಯಲ್ಲಿ ಬಳ್ಳಾರಿಯ ಗೌತಮ ನಗರದಲ್ಲಿ ಕಾರ್ಯಾಚರಣೆ ನಡೆಸಿ 9 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಟೋ ಮೂಲಕ ಅಕ್ರಮವಾಗಿ ಎಲ್‌ಪಿಜಿ ಸಿಲಿಂಡರ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ, ಪೊಲೀಸರು, ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಗನಮೂರ್ತಿ ಎಂಬುರನ್ನು ಬಂಧಿಸಿ, ಆತನ ಬಳಿ ಇದ್ದ, 5 ವಾಣಿಜ್ಯ ಬಳಕೆಯ (ಕಮರ್ಷಿಯಲ್) ಗ್ಯಾಸ್ ಸಿಲಿಂಡರ್‌ಗಳನ್ನು ಹಾಗೂ 4 ಗೃಹ ಬಳಕೆಯ (ಡೊಮೆಸ್ಟಿಕ್) ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಮಗೆ ಅರ್ಜೆಂಟ್ ಆಗಿ ಅಡುಗೆ ಅನಿಲ ಸಿಲಿಂಡರ್ ಬೇಕಾಗಿದೆ ಎಂದು ಗ್ರಾಹಕರ ರೂಪದಲ್ಲಿ ಬೇಡಿಕೆ ಇಟ್ಟು ಕಾರ್ಯಾಚರಣೆ ನಡೆಸಿ, ಆರೋಪಿ ಮೂರ್ತಿಯನ್ನು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ, ದಾಖಲಾಗಿದ್ದು, ಗ್ರಾಮೀಣ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular