ಬಳ್ಳಾರಿ : ಮೈಸೂರಿನ ಸುತ್ತೂರು ಕ್ಷೇತ್ರದ ಜೆ.ಎಸ್.ಎಸ್ ಉಚಿತ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದ ಬಡ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, 1 ರಿಂದ 8ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಪೋಷಕರು ಶಾಲೆಯ ಅಧಿಕೃತ ವೆಬ್‌ಸೈಟ್‌ಗಳಾದ www.jssschoolsuttur.org ಅಥವಾ www.jssonline.org ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.
ಏಪ್ರಿಲ್ 2 ರಿಂದ ಅರ್ಜಿ ವಿತರಣೆ ಪ್ರಾರಂಭ, ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ “ಮುಖ್ಯೋಪಾಧ್ಯಾಯರು, ಜಿ.ಎಸ್.ಎಸ್. ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ – 571129” ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.ಅರ್ಜಿಯ ಜೊತೆಗೆ ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.7411486938, ದೂ.08221-232332 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.02 ರಂದು ‘ಪೊಲೀಸ್ ಧ್ವಜ ದಿನಾಚರಣೆ’ ಕಾರ್ಯಕ್ರಮ
ಬಳ್ಳಾರಿ : ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಏ.02 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಜಿಲ್ಲಾ ಸಶಸ್ತç ಪೊಲೀಸ್ ಕವಾಯತು ಮೈದಾನದಲ್ಲಿ ‘ಪೊಲೀಸ್ ಧ್ವಜ ದಿನಾಚರಣೆ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ನಿವೃತ್ತ ಸಹಾಯಕ ಸಬ್-ಇನ್ಸ್ಪೆಕ್ಟರ್ ಆದ ಶ್ರೀನಿವಾಸಲು ಎಂ. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಪಿ.ಎಸ್. ಹರ್ಷ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ. ಪೆನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಕೆ.ಪಿ. ರವಿಕುಮಾರ್ ಮತ್ತು ಎಸ್. ನವೀನ್‌ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ- ಸಿಬ್ಬಂದಿ ವರ್ಗ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

