ಮುಲ್ಲಾನಪುರದ ಮಹಾವೀರ್ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಫೀಲ್ಡಿಂಗ್ ಆರಿಸಿಕೊಂಡು ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕಾನಲಿ, ಶ್ರೇಯಸ್ ಐಯ್ಯರ್ (ನಾಯಕ), ನೆಹಾಲ್ ವಾಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್, ಮಾರ್ಕೋ ಜ್ಯಾನ್ಸನ್, ಜೇವಿಯರ್ ಬಾರ್ಟ್ಲೆಟ್, ವಿಜಯ್ಕುಮಾರ್ ವೈಶಾಖ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್
ಗುಜರಾತ್ ಟೈಟನ್ಸ್ ಆಡುವ ಬಳಗ: ಸೈ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ ( ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಎಂ. ಶಹರುಖ್ ಖಾನ್, ರಾಹುಲ್ ತೇವತಿಯಾ, ರಾಶಿದ್ ಖಾನ್, ಕಗಿಸೋ ರಬಾಡಾ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್

