ಬೆಂಗಳೂರು: ಏಪ್ರಿಲ್ 1ರಿಂದ ರಾಷ್ಟ್ರೀಯ ಜನಗಣತಿ– 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್ ಪೋರ್ಟಲ್ನಲ್ಲಿ ‘ಸ್ವಯಂ–ಗಣತಿ’ಗೆ ಅವಕಾಶ ಕಲ್ಪಿಸಲಾಗಿದೆ. ಜನಗಣತಿ ಯಶಸ್ಸಿಗೆ ಎಲ್ಲರೂ ಸಹಕಾರ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯಪಾಲರು
ಜನಗಣತಿ 2027ರ ಅಂಗವಾಗಿ ನಾವು ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. 2026ರ ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ನಲ್ಲಿ ಭರ್ತಿ ಮಾಡಬಹುದು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.
2026, ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಾವು ಖಚಿತಪಡಿಸುತ್ತೇವೆ. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ
ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಂಪನ್ಮೂಲದ ಸಮರ್ಪಕ ಹಂಚಿಕೆಗೆ ದಾರಿ ತೋರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಜನಗಣತಿ 2027ರ ಅಂಗವಾಗಿ ನಾವು ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. 2026ರ ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ನಲ್ಲಿ ಭರ್ತಿ ಮಾಡಬಹುದು. ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ.
ಇದು ಕೇವಲ ಕರ್ತವ್ಯವಲ್ಲ, ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆ. ಇಂದು ನೀವು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು, ಸೇವೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಆಧಾರವಾಗುತ್ತದೆ. 2026, ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಾವು ಖಚಿತಪಡಿಸುತ್ತೇವೆ. ಆದ್ದರಿಂದ ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್
ಏಪ್ರಿಲ್ 1ರಿಂದ ರಾಷ್ಟ್ರೀಯ ಜನಗಣತಿ– 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್ ಪೋರ್ಟಲ್ನಲ್ಲಿ ‘ಸ್ವಯಂ–ಗಣತಿ’ಗೆ ಅವಕಾಶ ಕಲ್ಪಿಸಲಾಗಿದೆ.
ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ನಲ್ಲಿ ಭರ್ತಿ ಮಾಡಬಹುದು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

