ಬೆಂಗಳೂರು: ಶ್ವಾಸಕೋಶದ ಸೋಂಗಿನಿಂದ ಉಸಿರಾಟ ತೊಂದರೆಗೆ ಒಳಗಾಗಿದ್ದ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಹಕಾಲಿಸಲಾಗಿದೆ.
ಡಿ. ಸುಧಾಕರ್ ಅವರಗೆ ಶ್ವಾಸಕೋಶ ಸೋಂಕಿನಿಂದ ಉಸಿರಾಟದಲ್ಲಿ ತೊಂದರೆಯಾದ ಕಾರಣದಿಂದ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗಿದೆ. ಅವರನ್ನು ಪರೀಕ್ಷಿಸಿದ ವೈದ್ಯರು ಕೂಡಲೇ ಅವರನ್ನು ಐಸಿಯುಗೆ ದಾಖಲಿಸಲು ಸೂಚಿಸಿ ಚಿಕಿತ್ಸೆ ನೀಡಿದ್ದಾರೆ.
ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ನಿಗಾ ವಹಿಸಿದ್ದಾರೆ ಎಂದು ಹೇಳಲಾಗಿದೆ.

