HomeKarnatakaರಾಜ್ಯದ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗೆ ಮಕ್ಕಳನ್ನು ಬಳಸಿದರೆ ಬೀಳುತ್ತೆ FIR : ಶಿಕ್ಷಣ ಇಲಾಖೆ ಖಡಕ್...

ರಾಜ್ಯದ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗೆ ಮಕ್ಕಳನ್ನು ಬಳಸಿದರೆ ಬೀಳುತ್ತೆ FIR : ಶಿಕ್ಷಣ ಇಲಾಖೆ ಖಡಕ್ ಆದೇಶ.!

ಬೆಂಗಳೂರು :   ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವ ಅನಿಷ್ಠ ಪದ್ಧತಿಗೆ ಬ್ರೇಕ್ ಹಾಕಲು ಶಾಲಾ ಶಿಕ್ಷಣ ಇಲಾಖೆ ಈಗ ಅಂತಿಮ ಎಚ್ಚರಿಕೆ ನೀಡಿದೆ. ಈಗಾಗಲೇ ಈ ಬಗ್ಗೆ ಹಲವಾರು ಸೂಚನೆಗಳನ್ನು ನೀಡಿದ್ದರೂ, ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ಮತ್ತು ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡುವುದಲ್ಲದೆ, ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಹಾಗೂ ಪ್ರಥಮ ವರ್ತಮಾನ ವರದಿ (FIR) ದಾಖಲಿಸುವುದಾಗಿ ಆಯುಕ್ತರು ಅತ್ಯಂತ ತುರ್ತು ಸುತ್ತೋಲೆ ಹೊರಡಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಶಾಲಾ ಪರಿಸರದ ಘನತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಈ ಕಠಿಣ ಕ್ರಮಕ್ಕೆ ಮುಂದಾಗಿದೆ.

2025 ರಲ್ಲೇ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ..ಏನಿದೆ ಆದೇಶದಲ್ಲಿ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯಲ್ಲಿ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ ಆಕ್ಷೇಪಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತಹವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular