HomeKarnatakaಬೆಂಗಳೂರು-ವಿಜಯಪುರ ಎಕ್ಸ್‌ ಪ್ರೆಸ್ ರೈಲು: ಕೇಂದ್ರಕ್ಕೆ ಸಚಿವ ಎಂ.ಬಿ. ಪಾಟೀಲ್ ಪತ್ರ

ಬೆಂಗಳೂರು-ವಿಜಯಪುರ ಎಕ್ಸ್‌ ಪ್ರೆಸ್ ರೈಲು: ಕೇಂದ್ರಕ್ಕೆ ಸಚಿವ ಎಂ.ಬಿ. ಪಾಟೀಲ್ ಪತ್ರ

ಬೆಂಗಳೂರು: ಬೆಂಗಳೂರು ಮತ್ತು ವಿಜಯಪುರ ನಡುವೆ ಎಕ್ಸ್‌ ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಮಾರ್ಚ್ 25 ರಿಂದ ಸಂಚಾರಕ್ಕೆ ಮುಕ್ತವಾಗಿರುವ ಆಲಮಟ್ಟಿ ಮತ್ತು ವಂಡಾಲ್ ನಡುವಿನ 9.60 ಕಿ.ಮೀ. ಡಬಲ್-ಲೈನ್ ರೈಲ್ವೆ ಕಾಮಗಾರಿ ಪೂರ್ಣಗೊಂಡ ನಂತರ ಈ ಬೇಡಿಕೆ ಬಂದಿದೆ. ಈ ಸಂಬಂಧ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು–ವಿಜಯಪುರ ನಡುವೆ ನೇರ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಶೀಘ್ರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದೇನೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೂ ಮನವಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗದಗ–ಹೊಟಗಿ ದ್ವಿಪಥ ಯೋಜನೆಯಡಿ ಆಲಮಟ್ಟಿ–ವಂಡಾಳ್ ನಡುವಿನ 9.60 ಕಿಮೀ ಬ್ರಾಡ್ ಗೇಜ್ ಜೋಡಿ ಮಾರ್ಗ ಕಾಮಗಾರಿ ಪೂರ್ಣಗೊಂಡು, 2026ರ ಮಾರ್ಚ್ 25ರಿಂದ ಪ್ರಯಾಣಿಕರ ಸಂಚಾರಕ್ಕೆ ತೆರೆಯಲಾಗಿದೆ.  ಆದರೆ, ಇಂತಹ ಮೂಲಸೌಕರ್ಯ ಅಭಿವೃದ್ಧಿಯ ನಡುವೆಯೂ ಬೆಂಗಳೂರು–ವಿಜಯಪುರ ಪ್ರಯಾಣಕ್ಕೆ ಇನ್ನೂ 15 ಗಂಟೆಗಳಿಗಿಂತ ಹೆಚ್ಚು ಸಮಯ ಬೇಕಾಗುತ್ತಿದ್ದು, ಸಾವಿರಾರು ಪ್ರಯಾಣಿಕರಿಗೆ ಅನಗತ್ಯ ವಿಳಂಬ ಉಂಟುಮಾಡುತ್ತಿದೆ.

ಶಿಕ್ಷಣ, ಆರೋಗ್ಯ, ವ್ಯಾಪಾರ ಹಾಗೂ ಆಡಳಿತ ಕಾರ್ಯಗಳಿಗಾಗಿ ನಿರಂತರವಾಗಿ ಸಂಚರಿಸುವ ಜನತೆಗೆ ವೇಗವಾದ ಮತ್ತು ಸುಲಭ ಸಂಪರ್ಕ ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ, ಬೆಂಗಳೂರು–ವಿಜಯಪುರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಆರಂಭಿಸುವುದು ಅತ್ಯಾವಶ್ಯಕವಾಗಿದೆ. ಹೊಸ ಜೋಡಿ ಮಾರ್ಗದ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡು, ಮಧ್ಯಂತರ ನಿಲ್ದಾಣಗಳನ್ನು ಕಡಿಮೆ ಮಾಡುವುದರ ಜೊತೆಗೆ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳನ್ನು ಅನುಸರಿಸಿದರೆ, ಪ್ರಸ್ತುತ 15 ಗಂಟೆಗಳ ಪ್ರಯಾಣವನ್ನು ಸುಮಾರು 10 ಗಂಟೆಗೆ ಇಳಿಸಲು ಸಾಧ್ಯವಾಗುತ್ತದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular