HomeKarnatakaದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಅಧಿಕಾರ ದುರುಪಯೋಗವಲ್ಲವೇ: ಇನ್ಸ್ ಪೆಕ್ಟರ್ ಸಂದೇಶ್ ಗೆ ಹೈಕೋರ್ಟ್...

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಅಧಿಕಾರ ದುರುಪಯೋಗವಲ್ಲವೇ: ಇನ್ಸ್ ಪೆಕ್ಟರ್ ಸಂದೇಶ್ ಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಅಮಾನತುಗೊಂಡಿರುವ ಮೂಡಬಿದ್ರೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್, ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.

ಮಹಿಳೆ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದು ಕೋರಿ ಸಂದೇಶ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದೆ.

ಇನ್ಸ್ ಪೆಕ್ಟರ್ ಸಂದೇಶ್ ಪರ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್ಸ್ ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಆಧಾರವಿಲ್ಲ ಎಂದು ಹೇಳಿದ್ದಾರೆ. ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇನ್ಸ್ ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಪ್ರಶ್ನಿಸಿದ್ದು, ಏಪ್ರಿಲ್ 6ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲಿಯವರೆಗೆ ಬಂಧಿಸದಂತೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಶಿಕ್ಷಕಿ ನೀಡಿದ ದೂರಿನ ಅನ್ವಯ ಸಂದೇಶ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 2018 ರಿಂದ 2023ರ ವರೆಗೆ ಮನೆಗೆ ಬಂದು ಸಂದೇಶ್ ಅತ್ಯಾಚಾರ ಎಸಗಿದ್ದಾರೆ. ಬೆದರಿಸಿದ್ದಾರೆ ಎಂದು ದೂರು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular