HomeKarnatakaಡಿಜಿಟಲ್ ಪ್ಲಾಟ್ಫಾರ್ಮ್ ಬಳಕೆ: ವಿದ್ಯಾರ್ಥಿಗಳ ಮೊಬೈಲ್ ವ್ಯಸನ ನಿವಾರಣೆಗೆ ಮಾರ್ಗಸೂಚಿ

ಡಿಜಿಟಲ್ ಪ್ಲಾಟ್ಫಾರ್ಮ್ ಬಳಕೆ: ವಿದ್ಯಾರ್ಥಿಗಳ ಮೊಬೈಲ್ ವ್ಯಸನ ನಿವಾರಣೆಗೆ ಮಾರ್ಗಸೂಚಿ

ಬೆಂಗಳೂರು: ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಡಿಜಿಟಲ್ ಪ್ಲಾಟ್ಫಾರ್ಮ್ ಬಳಕೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ, ಪೋಷಕರಿಗೆ ಜಾಗೃತಿ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಅಂಶ ಇರುವ ಕರಡು ನೀತಿ ರೂಪಿಸಲಾಗಿದೆ. ಸಾರ್ವಜನಿಕರ ಅಭಿಪ್ರಾಯ ಪಡೆದುಕೊಂಡು ಅಂತಿಮ ನೀತಿ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆರೋಗ್ಯಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆರೋಗ್ಯ ಇಲಾಖೆ, ಪ್ರಾಥಮಿಕ ಶಿಕ್ಷಣ ಇಲಾಖೆ, ನಿಮ್ಹಾನ್ಸ್ ಸಂಸ್ಥೆ ಸಹಯೋಗದಲ್ಲಿ ಅಧ್ಯಯನ ನಡೆಸಲಾಗಿದ್ದು, ಇದರ ಪ್ರಕಾರ ನಾಲ್ವರಲ್ಲಿ ಒಬ್ಬ ವಿದ್ಯಾರ್ಥಿ ಡಿಜಿಟಲ್ ಸಮಸ್ಯೆಗೆ ತುತ್ತಾಗಿರುವುದು ಕಂಡುಬಂದಿದೆ. ಹೀಗಾಗಿ ಆರಂಭಿಕ ಹಂತದಲ್ಲಿ ಮಕ್ಕಳ ತೊಂದರೆ ಗುರುತು ಮಾಡಿ ಪರಿಹಾರ ಕಂಡುಕೊಳ್ಳಲು ಜವಾಬ್ದಾರಿಯುತ ಡಿಜಿಟಲ್ ಬಳಕೆ ಬಗ್ಗೆ ನೀತಿ ರೂಪಿಸಲಾಗುತ್ತಿದೆ. ಮಕ್ಕಳಲ್ಲಿ ಅತಿಯಾದ ಡಿಜಿಟಲ್ ಪ್ಲಾಟ್ಫಾರ್ಮ್ ಬಳಕೆ ಪರಿಣಾಮ ವಿದ್ಯಾರ್ಥಿಗಳಲ್ಲಿ ಉದ್ವೇಗ, ನಿದ್ರಾಹೀನತೆ, ಏಕಾಗ್ರತೆಯ ಕೊರತೆ ಸೇರಿ ಕೆಲವು ಸಮಸ್ಯೆ ಕಾಣಿಸುತ್ತಿವೆ. ಸಾಮಾಜಿಕ ಪ್ರತ್ಯೇಕತೆ ಮನೋಭಾವ ಬೆಳೆಯಲು ಕಾರಣವಾಗುತ್ತಿದೆ ಎಂದು ಅಧ್ಯಯನ ತಿಳಿಸಿದೆ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆಯ https:hfwcom.karnataka.gov.in ಜಾಲತಾಣದಲ್ಲಿ ಕರಡು ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಲಾಗಿದ್ದು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಆಸಕ್ತರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳಿದ್ದಲ್ಲಿ 15 ದಿನಗಳ ಒಳಗೆ [email protected] ಇ-ಮೇಲ್ ಗೆ ಕಳುಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular