HomeLatest NewsBIG NEWS : ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7 ರಂದು...

BIG NEWS : ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7 ರಂದು ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು.!

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರವು ಏಪ್ರಿಲ್ 7, 2026 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ನೌಕರರು ಮತ್ತು ಎಲ್ಲಾ ಜಿಲ್ಲೆ/ತಾಲ್ಲೂಕುಗಳ ಮಹಿಳಾ ಪದಾಧಿಕಾರಿಗಳಿಗೆ ಈ ರಜೆ ಅನ್ವಯವಾಗಲಿದೆ.ಈ ರಜೆಯನ್ನು ಪಡೆಯುವ ನೌಕರರು ತಮ್ಮ ಮೇಲಧಿಕಾರಿಗಳಿಂದ ಅನುಮತಿ ಪಡೆಯಬೇಕು ಮತ್ತು ಕಾರ್ಯಾಗಾರದಲ್ಲಿ ಭಾಗವಹಿಸಿದ ಬಗ್ಗೆ ಹಾಜರಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಆರ್ಥಿಕ ಇಲಾಖೆಯೂ ಇದಕ್ಕೆ ಸಮ್ಮತಿ ಸೂಚಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇವರ ವತಿಯಿಂದ “ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ” ಅಂಗವಾಗಿ ದಿನಾಂಕ 07.04.2026 ರಂದು ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ “ಸಮಕಾಲೀನ ಯುಗದಲ್ಲಿ ಮಹಿಳೆಯರ ಮುಂದಿರುವ ಸವಾಲುಗಳು” ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏನಿದೆ ಸರ್ಕಾರದ ಆದೇಶದಲ್ಲಿ..?

ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರು ಹಾಗೂ ಎಲ್ಲಾ ಜಿಲ್ಲಾ/ತಾಲ್ಲೂಕುಗಳ ಮಹಿಳಾ ಪದಾಧಿಕಾರಿಗಳು ತಮ್ಮ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು, ಕಡ್ಡಾಯವಾಗಿ ಹಾಜರಾತಿ ಪ್ರಮಾಣ ಪತ್ರವನ್ನು ಸಲ್ಲಿಸುವ ಷರತ್ತಿಗೊಳಪಟ್ಟು, ದಿನಾಂಕ 07.04.2026 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆ (Special Casual Leave) ಯನ್ನು ಮಂಜೂರು ಮಾಡಲಾಗಿದೆ. ಈ ಸುತ್ತೋಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 173 ವೆಚ್ಚ-12/2026 ದಿನಾಂಕ: 01.04.2026 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular