HomeKarnatakaBIG NEWS: ಹೆಚ್.ಡಿ.ಕುಮಾರಸ್ವಾಮಿ ಹಾಗೂ ಎಡಿಜಿಪಿ,ಎಸ್ ಐಟಿ ಮುಖ್ಯಸ್ಥ ಚಂದ್ರಶೇಖರ್ ಪ್ರಕರಣ: ರಾಜಿ ಸಂಧಾನಕ್ಕೆ ಒಪ್ಪಿಗೆ

BIG NEWS: ಹೆಚ್.ಡಿ.ಕುಮಾರಸ್ವಾಮಿ ಹಾಗೂ ಎಡಿಜಿಪಿ,ಎಸ್ ಐಟಿ ಮುಖ್ಯಸ್ಥ ಚಂದ್ರಶೇಖರ್ ಪ್ರಕರಣ: ರಾಜಿ ಸಂಧಾನಕ್ಕೆ ಒಪ್ಪಿಗೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ರಾಜಿ ಸಂಧಾನಕ್ಕೆ ಎರಡೂ ಕಡೆಯ ವಕೀಲರು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಎಡಿಜಿಪಿ, ಎಸ್ ಐಟಿ ಮುಖ್ಯಸ್ಥ ಚಂದ್ರಶೇಖರ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಹೈಕೋರ್ಟ್ ಸಲಹೆಯಂತೆ ಆರೋಪಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ದೂರುದಾರ ಚಂದ್ರಶೇಖರ್ ರಾಜಿ ಸಂಧಾನದ ಮಾತುಕತೆಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ ಹೈಕೋರ್ಟ್ರಾಜಿ ಸಂಧಾನಕ್ಕೆ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಲಾಗುವುದು ಎಂದು ಹೇಳಿದ್ದು, ಹಾಜರಾಗಬೇಕಾದ ದಿನಾಂಕ, ಸ್ಥಳವನ್ನು ತಿಳಿಸಲಾಗುವುದು ಎಂದು ಇಬ್ಬರು ಕಡೆ ವಕೀಲರಿಗೆ ಹೇಳಿ ವಿಚಾರಣೆಯನ್ನು ಏಪ್ರಿಲ್ 30ಕ್ಕೆ ಮುಂದೂಡಿದೆ.

ಸಾಲು ಸಾಲು ಆರೋಪ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್ ಬೆದರಿಕೆ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣ ರದ್ದುಕೋರಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು ಹೈಕೋರ್ಟ್ ಸಹ ಈ ಅರ್ಜಿಯನ್ನು ಹಲವು ಬಾರಿ ವಿಚಾರಣೆ ನಡೆಸಿದೆ. ಕೊನೆಗೆ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ ಎಂದು ಕುಮಾರಸ್ವಾಮಿ ಹಾಗೂ ಚಂದ್ರಶೇಖರ್ ಪರ ವಕೀಲರಿಗೆ ಸಲಹೆ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದರಂತೆ ಇದೀಗ ರಾಜಿ ಸಂಧಾನ ಮಾತುಕತೆಗೆ ಇಬ್ಬರು ಕಡೆ ವಕೀಲರು ಸಮ್ಮಿತಿಸಿದ್ದಾರೆ. ಇದರಿಂದ ಕೋರ್ಟ್, ರಾಜಿ ಸಂಧಾನಕ್ಕೆ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ.

ನಿಯಮ ಉಲ್ಲಂಘಿಸಿ ಸಾಯಿ ಮಿನರಲ್ಸ್‌ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್‌ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದರಿಂದ ಕುಮಾರಸ್ವಾಮಿ, ನಿಖಿಲ್‌ ಮತ್ತು ಶಾಸಕ ಸುರೇಶ್‌ ಬಾಬು ಮಾಧ್ಯಮಗಳಲ್ಲಿ ಚಂದ್ರಶೇಖರ್‌ ಅವರ ವಿರುದ್ಧ ಕೆಲವೊಂದು ಆರೋಪ ಮಾಡಿದ್ದರು.

ಈ ಸಂಬಂಧ ಎಡಿಜಿಪಿ ಚಂದ್ರಶೇಖರ್‌ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್‌ ಬಾಬು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಪೊಲೀಸರು ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 223 ಮತ್ತು 224 ಅಡಿ ಎಫ್‌ಐಆರ್‌ ದಾಖಲಿಸಿದ್ದರು. ಬಳಿಕ ಕುಮಾರಸ್ವಾಮಿ, ಈ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular