HomeLatest News'ನಮ್ಮ ಮೆಟ್ರೋ' ಪ್ರಯಾಣಿಕರೇ ಗಮನಿಸಿ ; ಏ.5 ರಂದು ಭಾನುವಾರ 2 ಗಂಟೆ ರೈಲು ಸಂಚಾರ...

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ ; ಏ.5 ರಂದು ಭಾನುವಾರ 2 ಗಂಟೆ ರೈಲು ಸಂಚಾರ ಸ್ಥಗಿತ.!

ಬೆಂಗಳೂರು  : ನಮ್ಮ ಮೆಟ್ರೋದ ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳ ನಡುವೆ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ, ಏಪ್ರಿಲ್ 5ರ ಭಾನುವಾರ ಬೆಳಿಗ್ಗೆ ರೈಲು ಸಂಚಾರದಲ್ಲಿ ಬದಲಾವಣೆ ಇರಲಿದೆ ಎಂದು ಬಿಎಂಆರ್‌ಸಿಎಲ್ (BMRCL) ಪ್ರಕಟಿಸಿದೆ.

  • ಸಮಯ: ಭಾನುವಾರ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ (2 ಗಂಟೆಗಳು).
  • ಸಂಚಾರ ಸ್ಥಗಿತ: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸಂಚಾರವಿರುವುದಿಲ್ಲ.
  • ಯಥಾಸ್ಥಿತಿ ಸಂಚಾರ: ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ, ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್‌ವರೆಗೆ ಹಾಗೂ ಹಸಿರು ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚರಿಸಲಿವೆ.
  • ಪುನರಾರಂಭ: ಬೆಳಿಗ್ಗೆ 9:00 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಸಂಚಾರ ಸಹಜ ಸ್ಥಿತಿಗೆ ಮರಳಲಿದೆ.

ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಬೆಳಿಗ್ಗೆ 2 ಗಂಟೆಗಳಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ; ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ವೈಟೀಲ್ಡ್ (ಕಾಡುಗೋಡಿ); ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆ‌ರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಬೆಳಿಗ್ಗೆ 09:00 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ. ನಮ್ಮ ಮೆಟ್ರೋ ಪ್ರಯಾಣಿಕರು ಮೇಲೆ ತಿಳಿಸಿರುವ ಬದಲಾವಣೆಗಳನ್ನು ಗಮನಿಸಿ ಸಹಕರಿಸುವಂತೆ ವಿನಂತಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular