HomeKarnataka‘ಬಾಲಕಿ ಗರ್ಭಿಣಿಯಾಗಿ ಬಂದರೆ ಪೊಲೀಸರಿಗೆ ತಿಳಿಸಬೇಕು’ : ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಖಡಕ್...

‘ಬಾಲಕಿ ಗರ್ಭಿಣಿಯಾಗಿ ಬಂದರೆ ಪೊಲೀಸರಿಗೆ ತಿಳಿಸಬೇಕು’ : ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಖಡಕ್ ಸೂಚನೆ.!

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳನ್ನು ಮರೆಮಾಚುವ ಖಾಸಗಿ ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ ಕಾಯಿದೆ, 2012 (POCSO Act) ಅನ್ವಯ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಗರ್ಭಧಾರಣೆ ಪ್ರಕರಣಗಳು ಕಾನೂನುಬದ್ಧವಾಗಿ ವರದಿ ಮಾಡಬೇಕಾದ ಗಂಭೀರ ಪ್ರಕರಣಗಳಾಗಿವೆ.

POCSO ಕಾಯಿದೆಯ ಸೆಕ್ಷನ್ 19(1) ರಂತೆ: 19. Reporting of offences. (1) Notwithstanding anything contained in the Code of Criminal Procedure, 1973… any person… who has knowledge that such an offence has been committed, he shall provide such information to, – (a) The Special Juvenile Police Unit; or (b) The local police.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಬಾಲಗರ್ಭಿಣಿ ಪ್ರಕರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಲ್ಲಿ, ಸಂಬಂಧಿತ ವೈದ್ಯರು ತಕ್ಷಣವೇ ಸಮೀಪದ ವಿಶೇಷ ಬಾಲ ನ್ಯಾಯ ಪೊಲೀಸ್ ಘಟಕ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಮೇಲ್ಕಂಡ ಪ್ರಕರಣಗಳನ್ನು ವರದಿ ಮಾಡಲು ವಿಫಲವಾದ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನುಬದ್ಧ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

POCSO ಕಾಯಿದೆಯ ಸೆಕ್ಷನ್ 21(2) ರಂತೆ: ಯಾವುದೇ ಸಂಸ್ಥೆಯ ಜವಾಬ್ದಾರಿಯುತ ವ್ಯಕ್ತಿಯು ತನ್ನ ಅಧೀನದ ಸಿಬ್ಬಂದಿ ಇಂತಹ ಪ್ರಕರಣ ವರದಿ ಮಾಡಲು ವಿಫಲವಾದರೆ, ಅವರಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಇಂತಹ ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು.

ಖಾಸಗಿ ಆಸ್ಪತ್ರೆಗಳಿಗೆ ಸೂಚನೆಗಳು:

  • ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು.
  • ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು.
  • ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು.
  • ತನಿಖಾ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು.
  • ಸಿಬ್ಬಂದಿಗೆ ಪೋಕ್ಸೋ ಕಾಯಿದೆಯ ಬಗ್ಗೆ ಜಾಗೃತಿ ಮೂಡಿಸಬೇಕು.

ಕಡ್ಡಾಯ ವರದಿ: 18 ವರ್ಷದೊಳಗಿನ ಬಾಲಕಿಯರು ಗರ್ಭಿಣಿಯಾಗಿ ಆಸ್ಪತ್ರೆಗೆ ದಾಖಲಾದ ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿ ಅಥವಾ ವೈದ್ಯರು ಸ್ಥಳೀಯ ಪೊಲೀಸ್ ಠಾಣೆ ಅಥವಾ ವಿಶೇಷ ಬಾಲ ನ್ಯಾಯ ಪೊಲೀಸ್ ಘಟಕಕ್ಕೆ ಮಾಹಿತಿ ನೀಡುವುದು ಕಡ್ಡಾಯ.

ಜೈಲು ಶಿಕ್ಷೆಯ ಎಚ್ಚರಿಕೆ: ಪೋಕ್ಸೋ ಕಾಯಿದೆಯ ಸೆಕ್ಷನ್ 19 ಮತ್ತು 21ರ ಅಡಿಯಲ್ಲಿ ಪ್ರಕರಣ ವರದಿ ಮಾಡದಿದ್ದರೆ ವೈದ್ಯರಿಗೆ ಅಥವಾ ಆಸ್ಪತ್ರೆಯ ಜವಾಬ್ದಾರಿಯುತ ವ್ಯಕ್ತಿಗಳಿಗೆ 1 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.

ಸಹಾಯವಾಣಿ: ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡುವಂತೆ ಸೂಚಿಸಲಾಗಿದೆ.

ಗೌಪ್ಯತೆ ಮತ್ತು ಸಹಕಾರ: ಬಾಲಕಿಯರ ವೈದ್ಯಕೀಯ ದಾಖಲೆಗಳನ್ನು ಸುರಕ್ಷಿತವಾಗಿರಿಸುವುದು ಮತ್ತು ಅವರ ಗೌಪ್ಯತೆಯನ್ನು ಕಾಪಾಡುವುದರ ಜೊತೆಗೆ ಪೊಲೀಸ್ ತನಿಖೆಗೆ ಪೂರ್ಣ ಸಹಕಾರ ನೀಡಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular